Sunday, March 8, 2026
ಅಂಕಣಬೆಂಗಳೂರುಸುದ್ದಿ

ಸೌಜನ್ಯ ಮಾವ ವಿಠಲ ಗೌಡ ; ವಿರುದ್ಧ ಧರ್ಮಸ್ಥಳ ಗ್ರಾಮಸ್ಥರಿಂದ ಎಸ್‌ಐಟಿಗೆ ದೂರು-ಕಹಳೆ ನ್ಯೂಸ್

ಮಂಗಳೂರು: ಸೌಜನ್ಯ ಮಾವ ವಿಠಲ ಗೌಡ  ವಿರುದ್ಧ ಧರ್ಮಸ್ಥಳ ಗ್ರಾಮಸ್ಥರು ಎಸ್‌ಐಟಿಗೆ ದೂರು ನೀಡಿದ್ದಾರೆ.

ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಧರ್ಮಸ್ಥಳ ಗ್ರಾಮಸ್ಥ ಸಂದೀಪ್ ರೈ ದೂರು ಕೊಟ್ಟಿದ್ದಾರೆ. ತನಿಖಾ ಹಂತದಲ್ಲಿ ವಿಠಲ ಗೌಡನಿಂದ ಎಸ್ಐಟಿ ತನಿಖೆ ದಾರಿ ತಪ್ಪಿಸುತ್ತಿದ್ದಾರೆಂದು ಆರೋಪ ಹೊರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿಚಾರಣೆ ಮುಗಿಸಿ ಹೊರಬಂದು ವಿಡಿಯೋ ಹರಿಬಿಟ್ಟಿದ್ದಾರೆ. ಎಸ್ಐಟಿ ಯಾವುದೇ ಮಾಹಿತಿ ನೀಡದೇ ಇದ್ದರೂ ವಿಡಿಯೋ ಹರಿಬಿಟ್ಟು ತನಿಖೆ ಹಾದಿ ತಪ್ಪಿಸುತ್ತಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಜಾಹೀರಾತು
ಜಾಹೀರಾತು

ವಿಠಲ ಗೌಡನ ಹಿಂದೆ ಕೆಲ ವ್ಯಕ್ತಿಗಳು ಸೇರಿಕೊಂಡು ಷಡ್ಯಂತ್ರ ನಡೆಸುತ್ತಿದ್ದಾರೆ. ವಿಚಾರಣೆ ಮುಗಿಸಿ ಹೊರಗೆ ಬಂದ ಬಳಿಕ ಯೂಟ್ಯೂಬ್‌ಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ಮೂಲಕ ತನಿಖೆಯ ಹಾದಿ ತಪ್ಪಿಸಲು ವಿಠಲ ಗೌಡ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಾಕ್ಷ್ಯ ನಾಶ ಮಾಡಲು ಸಾರ್ವಜನಿಕವಾಗಿ ಹೇಳಿಕೆ ನೀಡಿದ ಬಗ್ಗೆಯೂ ದೂರು ನೀಡಲಾಗಿದೆ. ವಿಠಲ ಗೌಡ ವಿರುದ್ಧ ತನಿಖೆ ನಡೆಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ಸ್ವೀಕರಿಸಿರುವ ಎಸ್‌ಐಟಿ ಅಧಿಕಾರಿಗಳು ಸ್ವೀಕೃತಿ ನೀಡಿದ್ದಾರೆ.