Recent Posts

Sunday, April 26, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಒಕ್ಕೂಟದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸದ ಕಾರ್ಯಕ್ರಮದಡಿಯಲ್ಲಿ ನಡೆಯುವ ” ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ” ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಒಕ್ಕೂಟದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸದ ಕಾರ್ಯಕ್ರಮದಡಿಯಲ್ಲಿ ನಡೆಯುವ ” ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ” ಕಾರ್ಯಕ್ರಮ ಎರುಂಬು ವಿಷ್ಣುಮಂಗಲ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಅಳಿಕೆ ವಲಯಾಧ್ಯಕ್ಷರಾದ ರಾಜೇಂದ್ರ ರೈ ಉದ್ಘಾಟನೆ ಮಾಡಿ ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು. ಮುಳಿಯ ಒಕ್ಕೂಟ ಅಧ್ಯಕ್ಷರಾದ ಉದಯ್ ನಾಯ್ಕ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಯೋಜನಾ ಮುಖೆನ ನಡೆಯುವ ಸಮಾಜಮುಖಿ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿಷ್ಣು ಮಂಗಲ ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷರಾದ ವಸಂತ ಕುಲಾಲ್ ರವರು ಭಾಗವಹಿಸಿ ಶುಭ ಹಾರೈಸಿದರು. ಈ ಸಂಧರ್ಭ ಜ್ಞಾನವಿಕಾಸ ಸಂಯೋಜಕಿ ಶಾಲಿನಿ ಶೆಟ್ಟಿ ಹಾಗೂ ಟೈಲರಿಂಗ್ ಶಿಕ್ಷಕಿ ಸರೋಜಿನಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮುಂದಿನ 3 ತಿಂಗಳು ಸುಮಾರು 30 ಮಂದಿ ತರಬೇತಿ ಪಡೆಯಲಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಿದ ಅಳಿಕೆ ಪ್ರಾಥಮಿಕ ಅರೋಗ್ಯ ಕೇಂದ್ರದ ಸಮುದಯ ಅರೋಗ್ಯ ಅಧಿಕಾರಿ ರಂಜಿತಾರವರು ಸ್ವಸ್ಥ ನಾರಿ ಸಶಕ್ತ ಪರಿವಾರ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಸದಸ್ಯರು ಬಿಪಿ, ಶುಗರ್ ಪರೀಕ್ಷೆ ನಡೆಸಿದರು. ಜ್ಞಾನವಿಕಾಸ ಸಮನ್ವಯಧಿಕಾರಿ ಕಾರ್ಯಕ್ರಮ ನಿರೂಪಿಸಿ, ವಲಯ ಮೇಲ್ವಿಚಾರಕಿ ಮೀನಾಕ್ಷಿ ಸ್ವಾಗತಿಸಿ, ಸೇವಾಪ್ರತಿನಿಧಿ ವಿನಯ ರೈ ವಂದಿಸಿದರು.