Friday, April 24, 2026
ಅಂಕಣಸುದ್ದಿಹಾಸನ

ಗಣೇಶ ವಿಗ್ರಹಕ್ಕೆ ಅಪಮಾನ ; ಘಟನೆ ಖಂಡಿಸಿ ಇಂದು ಬೇಲೂರು ಬಂದ್- ಕಹಳೆ ನ್ಯೂಸ್

ಹಾಸನ: ಐತಿಹಾಸಿಕ ಬೇಲೂರಿನಲ್ಲಿ ಗಣೇಶನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ ಘಟನೆಯನ್ನು ಖಂಡಿಸಿ ಇಂದು ಬೇಲೂರು ಬಂದ್‌ಗೆ ಕರೆ ನೀಡಲಾಗಿದೆ.

ಹಿಂದೂಪರ ಸಂಘಟನೆಗಳಿಂದ ಬೇಲೂರು ಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ. ಸೆ.20ರ ರಾತ್ರಿ ಅಸ್ವಸ್ಥ ಮಹಿಳೆ ದೇವಾಲಯದೊಳಗೆ ತೆರಳಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದಳು. ಹಾಸನ ನಗರದ ವಿಜಯನಗರ ಬಡಾವಣೆಯ ಮಹಿಳೆ ಲೀಲಮ್ಮ ಕೃತ್ಯವೆಸಗಿದ್ದಾಳೆ. ಈಗಾಗಲೇ ಆರೋಪಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಸ್ವಸ್ಥ ಮಹಿಳೆಯ ಕೃತ್ಯದ ಹಿಂದೆ ಯಾರಿದ್ದಾರೆಂದು ತನಿಖೆ ನಡೆಸುವಂತೆ ಒತ್ತಾಯಿಸಿ ಬಂದ್‌ಗೆ ಕರೆ ಕೊಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಂದ್ ಹಿನ್ನೆಲೆ ಪಟ್ಟಣದಲ್ಲಿ ಬಹುತೇಕ ಬಂದ್ ವಾತಾವರಣ ನಿರ್ಮಾಣವಾಗಿದೆ. ವರ್ತಕರು ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ 10:30ರ ಬಳಿಕ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ.