
ಕಲ್ಲಡ್ಕ : ಅ 3 ರಂದು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನ ಹಾಗೂ ಉದ್ಘಾಟನಾ ಸಮಾರಂಭವು ನಡೆಯಿತು.
ದೀಪ ಬೆಳಗಿಸುವುದರ ಮೂಲಕ ಅತಿಥಿಗಳು ಶಿಬಿರಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದ ಉದ್ಘಾಟಕರಾದ ಶ್ರೀಮತಿ ವೀಣಾ ಟಿ ಶೆಟ್ಟಿ, ನಿವೃತ್ತ ಮಹಾಪ್ರಬಂಧಕರು , ಎಂ ಆರ್ ಪಿ ಎಲ್ ಇವರು ಮಾತನಾಡಿ ನನ್ನ ಏಳಿಗೆಗೆ ನಾನೇ ಶಿಲ್ಪಿ, ಸಂವಹನದ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು, ನಾನು ಎಂಬ ಅಹಂಕಾರವನ್ನು ತ್ಯಜಿಸಿ ಸಮಾಜದ ಏಳಿಗೆಗೆ ನಾವೆಲ್ಲರೂ ಶ್ರಮಿಸಬೇಕು, ಪ್ರತಿಯೊಬ್ಬರಲ್ಲಿಯೂ ವಿಶೇಷವಾದ ಚೈತನ್ಯವಿರುತ್ತದೆ ಅದನ್ನು ನಾವು ಹೊರತೆಗೆಯಬೇಕು ಕುಟುಂಬದ ಜವಾಬ್ದಾರಿಯ ಜೊತೆಗೆ ದೇಶದ ಜವಾಬ್ದಾರಿ ನಮ್ಮ ಜೊತೆಯಲ್ಲಿದ್ದು ಸುಂದರ ಸಮಾಜವನ್ನು ನಿರ್ಮಾಣ ಮಾಡುವುದು ವಿದ್ಯಾರ್ಥಿಗಳ ಕೈಯಲ್ಲಿದೆ ಎಂದರು, ಕಾರ್ಯಕ್ರಮದ ಅಧ್ಯಕ್ಷರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶ್ರೀರಾಮ ವಿದ್ಯಾ ಕೇಂದ್ರ ಸಂಸ್ಥಾಪಕರು ಮಾತನಾಡಿ ಉತ್ಥಾನ ಶಿಬಿರದ ಉದ್ದೇಶವನ್ನು ತಿಳಿಸಿದರು.
ವೇದಿಕೆಯಲ್ಲಿ ಶ್ರೀಮತಿ ಕಮಲ ಪ್ರಭಾಕರ್ ಭಟ್,ಶ್ರೀಯುತ ರಮೇಶ್ ಸಹಸಂಚಾಲಕರು ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ , ಶ್ರೀ ನಾಗೇಶ್ ಕಲ್ಲಡ್ಕ , ಶ್ರೀಮತಿ ಮಲ್ಲಿಕಾ ಶೆಟ್ಟಿ , ಶ್ರೀಮತಿ ಲಕ್ಷಿ ರಘುರಾಜ್ ಆಡಳಿತ ಮಂಡಳಿ ಸದಸ್ಯರು ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ, ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗಳಾದ ಶ್ರೀ ಕೃಷ್ಣ ಪ್ರಸಾದ್ ಕಾಯರ್‌ಕಟ್ಟೆ ಮತ್ತು ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.
ಶ್ರೀಮತಿ ಸೌಮ್ಯ ಕಾರ್ಯಕ್ರಮವನ್ನು ನಿರ್ವಹಿಸಿದರು.









