ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಪಿ. ಯಶಸ್ವಿ ನಾಯಕ್ ಅಥ್ಲೆಟಿಕ್ಸ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮತ್ತು ಕ್ಷೇತ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಜನಸೇವಾ ವಿದ್ಯಾಕೇಂದ್ರ ಚನ್ನೇನಹಳ್ಳಿ ಬೆಂಗಳೂರಿನಲ್ಲಿ ನಡೆಯಿತು.ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪಿ. ಯಶಸ್ವಿ ನಾಯಕ್ ಇವರು 800ಮೀ, 1500 ಮೀ., 400ಮೀ., ಹರ್ಡೆಲ್ಸ್ ನಲ್ಲಿ ರಾಜ್ಯ ಮತ್ತು ಕ್ಷೇತ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಮತ್ತು ಹಾಸನದಲ್ಲಿ ನಡೆಯುವ ರಾಷ್ಟçಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಾತ್ವಿಕ್ ಎಸ್. ಇವರು ರಾಜ್ಯಮಟ್ಟದ 3000ಮೀ ವಾಕ್ ರೇಸ್ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾAಶುಪಾಲರು,ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.













