Sunday, April 26, 2026
ಅಂಕಣಬೆಂಗಳೂರುಸುದ್ದಿ

ರಮ್ಯಾಗೆ ಅವಹೇಳನ ; ದರ್ಶನ್‌ ಅಭಿಮಾನಿಗಳ ವಿರುದ್ಧ 380 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ-ಕಹಳೆ ನ್ಯೂಸ್

ಬೆಂಗಳೂರು: ನಟಿ ರಮ್ಯಾಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಕಿದ ದರ್ಶನ್  ಅಭಿಮಾನಿಗಳ ಮೇಲೆ ಸಿಸಿಬಿ ಸೈಬರ್ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ

11 ಆರೋಪಿಗಳ ಮೇಲೆ 380 ಪುಟಗಳ ಸುಧೀರ್ಘ ಚಾರ್ಜ್‌ಶೀಟ್‌  ಸಲ್ಲಿಕೆ ಮಾಡಲಾಗಿದೆ. ಆರೋಪಿಗಳ ಮೊಬೈಲ್, ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕಿದ ಸ್ಕ್ರೀನ್ ಶಾಟ್‌, ವಿಡಿಯೋ ಶೇರ್ ಆಗಿರುವ ಲಿಂಕ್‌ಗಳು, ದೂರುದಾರೆ ರಮ್ಯಾ ಸ್ಟೇಟ್‌ಮೆಂಟ್, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಆರೋಪಿಗಳ ಸ್ವ ಇಚ್ಚಾ ಹೇಳಿಕೆ ಆಧಾರದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

60 ದಿನಗಳ ಡೆಡ್ ಲೈನ್ ಮುಗಿಯುತ್ತಾ ಬಂದ ಹಿನ್ನೆಲೆ ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಅಶ್ಲೀಲ ಕಮೆಂಟ್ ಹಾಕಿದ ಇನ್ನೂ 6 ಆರೋಪಿಗಳು ಪೊಲೀಸರಿಗೆ ಸಿಕ್ಕಿಲ್ಲ. ಆ ಆರೋಪಿಗಳು ಸಿಕ್ಕ ಬಳಿಕ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.

ಅಶ್ಲೀಲ ಕಮೆಂಟ್ ಹಾಕಿದ ಇನ್ನೂ ನಾಲ್ವರು ಆರೋಪಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಚಾರ್ಜ್ ಶೀಟ್ ಬೆನ್ನಲ್ಲೇ ಶೀಘ್ರದಲ್ಲೇ ಟ್ರಯಲ್ ಆರಂಭವಾಗಲಿದೆ.