ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ: ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನ &ಸಮಾರೋಪ -ಕಹಳೆ ನ್ಯೂಸ್

ಕಲ್ಲಡ್ಕ : ಅ. 6 ರಂದು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ &ಉತ್ಥಾನ&ಇದರ ಸಮಾರೋಪ ಸಮಾರಂಭವು ನಡೆಯಿತು.
ಕಾರ್ಯಕ್ರಮದ ಅಭ್ಯಾಗತರಾದ ಶ್ರೀಯುತ ಕಜಂಪಾಡಿ ಸುಬ್ರಹ್ಮಣ್ಯ ಭಟ್ ನಿವೃತ್ತ ಪ್ರಾಧ್ಯಾಪಕರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುಟುಂಬ ಪ್ರಭೋದಿನಿ ರಾಷ್ಟ್ರೀಯ ಮಾರ್ಗದರ್ಶಕ ಮಂಡಳಿಯ ಸದಸ್ಯರು ಇವರು ಮಾತನಾಡಿ ಕುಟುಂಬ, ಶಾಲೆ ಹಾಗೂ ಸಮಾಜ ಇವುಗಳು ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸಲು ಇರುವ ಕೇಂದ್ರಗಳು. ಈ ರೀತಿಯಾದ ಸಂಸ್ಕಾರ ಶಿಬಿರವು ವಿದ್ಯಾರ್ಥಿಗಳ ಜೀವನದಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ.
ತಮ್ಮ ಜೀವನದಲ್ಲಿ ಬಂಧುತ್ವ ಭಾವನೆಯನ್ನು ಬೆಳೆಸಿಕೊಳ್ಳಬೇಕು , ಸಾಮಾಜಿಕ ಜಾಲತಾಣಗಳ ಬಗ್ಗೆ ಎಚ್ಚರವಿರಬೇಕು ಹಾಗೂ ಪರಿಸರ ಸಂರಕ್ಷಣೆ, ಸ್ವದೇಶಿ ವಸ್ತುಗಳ ಬಳಕೆ ನಮ್ಮೆಲ್ಲರ ಜವಾಬ್ದಾರಿ ಎಂದರು.
ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶ್ರೀರಾಮ ವಿದ್ಯಾ ಕೇಂದ್ರ ಸಂಸ್ಥಾಪಕರು , ಡಾ. ಕಮಲ ಪ್ರಭಾಕರ್ ಭಟ್ ರಾಷ್ಟ್ರ ಸೇವಿಕ ಸಮಿತಿಯ ದಕ್ಷಿಣ ಪ್ರಾಂತ್ಯದ ಕಾರ್ಯಕಾರಿಣಿ ಮಾರ್ಗದರ್ಶಕ ಮಂಡಳಿಯ ಸದಸ್ಯರು, ಶ್ರೀಯುತ ವಸಂತ ಮಾಧವ ಸಂಚಾಲಕರು ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ, ಶ್ರೀಯುತ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಕಾರ್ಯನಿರ್ವಹಣಾಧಿಕಾರಿ ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ ಉಪಸ್ಥಿತರಿದ್ದರು.
ಶ್ರೀಮತಿ ಚೈತನ್ಯ ಕಾರ್ಯಕ್ರಮವನ್ನು ನಿರ್ವಹಿಸಿದರು.














