Saturday, March 7, 2026
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಕೋಕಾ ಕಾಯ್ದೆ ಬೆನ್ನಲ್ಲೆ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಕೋರ್ಟ್ ಗೆ ಶರಣು- ಕಹಳೆ ನ್ಯೂಸ್

ಮಂಗಳೂರು: ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಂಟ್ವಾಳದ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಮಂಗಳೂರು ಕೋರ್ಟಿಗೆ ಸರೆಂಡರ್ ಆಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದು, ಅಬ್ದುಲ್ ರಹಿಮಾನ್ ಕೊಲೆಯಾದ ಬಳಿಕ ಕೋರ್ಟಿಗೆ 1ಹಾಜರಾಗದೆ ಭರತ್ ತಪ್ಪಿಸಿಕೊಂಡಿದ್ದ. ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಕೋರ್ಟ್ ವಾರೆಂಟ್ ಹೊರಡಿಸಿತ್ತು.‌

ಜಾಹೀರಾತು
ಜಾಹೀರಾತು

ಇತ್ತೀಚೆಗೆ ಎಸ್ಪಿ ಡಾ.ಅರುಣ್ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ಅಶ್ರಫ್ ಕಲಾಯಿ ಪ್ರಕರಣದಲ್ಲಿ ವಾರೆಂಟ್ ಮತ್ತು ಹೆಚ್ಚುವರಿ ಕೋಕಾ ಕೇಸು ಬಿದ್ದ ಹಿನ್ನೆಲೆಯಲ್ಲಿ ಭರತ್ ಕುಮ್ಡೇಲು ಈಗ ಮಂಗಳೂರಿನ ಜಿಲ್ಲಾ ಕೋರ್ಟಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.