Saturday, March 7, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಸದನದಲ್ಲಿ ಅಗತ್ಯ ವಿಷಯಗಳು ಚರ್ಚೆಯಾಗಲಿ: ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ- ಕಹಳೆನ್ಯೂಸ್

ಮಂಗಳೂರು: ಇಂದಿನ ರಾಜಕಾರಣ ಕಂಡಾಗ ತುಂಬಾ ನೋವಾಗುತ್ತಿದೆ. ಸದನದಲ್ಲಿ ಅಗತ್ಯ ವಿಷಯ ಚರ್ಚಿಸುವ ಬದಲು ಅನಗತ್ಯ ವಿಚಾರಗಳನ್ನು ಚರ್ಚಿಸಲಾಗುತ್ತಿದೆ. ರಾಜ್ಯದಲ್ಲಿ ರೈತರ ಸಮಸ್ಯೆ, ಮಳೆ, ಬೆಳೆ ಇತ್ಯಾದಿಗಳ ಬದಲು ಹನಿ ಟ್ರ್ಯಾಪ್‌ ಸೇರಿದಂತೆ ಇತರ ವಿಚಾರಗಳ ಬಗ್ಗೆ ಅನಗತ್ಯ ಚರ್ಚಿಸಿ ಕಾಲಹರಣ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಎಲ್ಲರಿಗೂ ಅಧಿಕಾರ ಬೇಕು. ಜನಪರ ರಾಜಕೀಯ ದೂರವಾಗುತ್ತಿದ್ದು, ಸ್ವಂತಕ್ಕಾಗಿ ರಾಜಕೀಯ ಮಾಡಲಾಗುತ್ತಿದೆ. ಈ ವ್ಯವಸ್ಥೆಯನ್ನು ಕಂಡು ಬೇಸರವಾಗಿದೆ. ಜನಪರ ವ್ಯವಸ್ಥೆ ಜಾರಿಗೆ ತರುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದೇನೆ. ರಾಜಕೀಯದಿಂದ ದೂರವಾದರೆ ಸುಧಾರಣೆ ಮಾಡುವವರು ಯಾರು ಎಂದು ಪ್ರಶ್ನಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಖಾಸಗಿ ಸಹಭಾಗಿತ್ವದಲ್ಲಿ ಸರಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಸಾಧ್ಯವೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರಕ್ಕೆ ಇಚ್ಛಾಶಕ್ತಿ ಬೇಕು. ಕೇವಲ ಶಿಕ್ಷಣ ಸಚಿವರಿಂದ ಸಾಧ್ಯ ಎನ್ನಲಾಗದು. ಮುಖ್ಯಮಂತ್ರಿ, ಸಚಿವ ಸಂಪುಟ ಸೇರಿದಂತೆ ಎಲ್ಲರೂ ಆಸಕ್ತಿ ವಹಿಸಿ ಮಾಡಬೇಕು. ಕನ್ನಡ ಶಾಲೆಗಳಿಗೆ ಅನುಮತಿ ಪಡೆದು ಆಂಗ್ಲ ಮಾಧ್ಯಮ ನಡೆಸುತ್ತಿದ್ದ 417 ಶಾಲೆಗಳನ್ನು ಬಂದ್‌ ಮಾಡಿಸಲಾಗಿತ್ತು. ಅದಕ್ಕಾಗಿ 17 ಶಾಸಕರು ನನ್ನನ್ನು ವಿರೋಧಿಸಿದ್ದರು. ಇಂದಿಗೂ ಅನೇಕ ಶಾಲೆಗಳು ನಿಯಮ ಮೀರುತ್ತಿವೆ. ಅದಕ್ಕೆಲ ಕಾರಣ ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರಸ್ತುತ ಶಿಕ್ಷಣ ಸಚಿವರಾಗಿರುವ ಮಧು ಬಂಗಾರಪ್ಪ ಅವರು ಶಿಕ್ಷಣ ವ್ಯವಸ್ಥೆ ಪಾರದರ್ಶಕಗೊಳಿಸಲು ಸಾಕಷ್ಟು ಶ್ರಮಿಸುತ್ತಿದ್ದಾರೆ. ಆದರೆ ಅನುಭವ ಇನ್ನೂ ಬೇಕಿದೆ ಎಂದರು.

ಜಾಹೀರಾತು
ಜಾಹೀರಾತು

ರಾಜಕೀಯ ಕಾಲೇಜು

ರಾಜಕೀಯಕ್ಕೆ ಆಗಮಿಸುವ ರಾಜಕಾರಣಿಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ವಿಧಾನ ಮಂಡಲದ ನೇತೃತ್ವದಲ್ಲಿ ರಾಜಕೀಯ ಕಾಲೇಜನ್ನು ಪ್ರಾರಂಭಿಸಲು ಕ್ರಮ ಕೈಗೊಂಡಿದ್ದೇವೆ. ರಾಜಕೀಯ ಯಾವ ರೀತಿಯಲ್ಲಿ ಮಾಡಬೇಕು ಎಂಬುವುದನ್ನು ಕಲಿಸುವ ಕೆಲಸ ಕಾಲೇಜಿನಲ್ಲಿ ನಡೆಯಲಿದೆ. ಮೂರು ವರ್ಷದ ಪದವಿ ಕೋರ್ಸ್‌ ಆಗಿದ್ದು, ಇದಕ್ಕೆ ಸಂಬಂಧಿಸಿದ ತಯಾರಿಗಳು ನಡೆಯುತ್ತಿವೆ. ಮುಂದಿನ ಜೂನ್‌ ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾಲೇಜು ಪ್ರಾರಂಭವಾಗಲಿದೆ. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ಹಾಗೂ ನಾನು ಸೇರಿಕೊಂಡು ಕಾಲೇಜು ಪ್ರಾರಂಭಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನಿಸುತ್ತಿದ್ದೇವೆ. ಮುಂದಿನ ಒಂದು ತಿಂಗಳೊಳಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಬಸವರಾಜ್‌ ಹೊರಟ್ಟಿ ಹೇಳಿದರು.