ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ: ಬೆಂಗಳೂರು-ಹಾಸನ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ -ಕಹಳೆ ನ್ಯೂಸ್

ಈ ನಡುವೆ ಬೆಂಗಳೂರು ಹಾಗೂ ಹಾಸನ ನಡುವೆ ಬಸ್ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಜನರನ್ನು ನಿಯಂತ್ರಿಸಲು ಟಿಕೆಟ್ ಬುಕಿಂಗ್ ಕೂಡ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಹಾಸನಾಂಬೆ ದೇವಸ್ಥಾನ ಹಾಗೂ ಸುತ್ತಮುತ್ತ ಭಾರಿ ಸಂಖ್ಯೆಯಲ್ಲಿ ಜನರು ಬರುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಕಿಲೋ ಮೀಟರ್ ಗಟ್ಟಲೇ ಜನರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಈ ನಡುವೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈಗಾಗಲೇ ಹಾಸನಾಂಬೆ ದರ್ಶನ ಪಡೆಯಲೆಂದು 50 ಸಾವಿರ ಜನರು ಮುಂಗಡ ಟಿಕೆಟ್ ಕಾಯ್ದಿರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಕೆಟ್ ಬುಕಿಂಗ್ ಕೂಡ ಸಧ್ಯಕ್ಕೆ ಬಂದ್ ಆಗಿದೆ.












