
ಬೆಂಗಳೂರು: ಸರ್ಕಾರದ ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಭಾಗವಹಿಸಿದ್ದಾರೆ.
ಶನಿವಾರ ಅಶೋಕ್ ಅವರ ಜಾಲಹಳ್ಳಿಯ ನಿವಾಸಕ್ಕೆ ಗಣತಿದಾರರು ಆಗಮಿಸಿದ್ದಾರೆ. ಈ ವೇಳೆ ತಮ್ಮ ಹಾಗೂ ಕುಟುಂಬಸ್ಥರ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಕೆಲ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಂಡಿಲ್ಲ.
ಸಮೀಕ್ಷೆಯಲ್ಲಿ ಪಾಲ್ಗೊಂಡ ವಿಚಾರವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಅಶೋಕ್ ಬಹಿರಂಗಗೊಳಿಸಿಲ್ಲ.
ಒಕ್ಕಲಿಗ ಸಮಾಜದ ಪ್ರಭಾವಿ ನಾಯಕರಾಗಿರುವ ಅಶೋಕ್ ಅವರು ಸಮಾಜ ಜಾತಿಗಣತಿ ವಿಚಾರದ ಬಗ್ಗೆ ಆಯೋಜಿಸಿದ್ದ ಸಭೆಯಲ್ಲಿ ಈ ಹಿಂದೆ ಭಾಗವಹಿಸಿದ್ದರು.














