Recent Posts

Sunday, April 26, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜನಮನ ಕಾರ್ಯಕ್ರಮದಲ್ಲಿ ಜನರು ಅಸ್ವಸ್ಥ: ಕ್ಷಮೆ ಕೇಳಿದ ಶಾಸಕ ಅಶೋಕ್ ರೈ

ಪುತ್ತೂರು: ಸೋಮವಾರ ಇಲ್ಲಿನ ಕೊಂಬೆಟ್ಟು ಕಾಲೇಜು ಬಳಿಯ ಮೈದಾನದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ‌ ಕೆಲವರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ರೈ ಕ್ಷಮೆ ಕೋರಿದ್ದಾರೆ.

‘ನಿರೀಕ್ಷಿಸಿದಕ್ಕಿಂತ ಹೆಚ್ಚು ಜನರು ಕಾರ್ಯಕ್ರಮಕ್ಕೆ ಬಂದಿದ್ದರು.‌ ಮಧ್ಯಾಹ್ನ ಮಳೆಯೂ ಬಂತು. ಹೀಗಾಗಿ ಜನಸ್ತೋಮದಲ್ಲಿ ಸಿಲುಕಿ ಕೆಲವು ಮಂದಿ ಅಸ್ವಸ್ಥರಾದರು. ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

‘ಎಲ್ಲ ಬಗೆಯ ವ್ಯವಸ್ಥೆ ಮಾಡಿದ್ದರೂ ಜನಸಂದಣಿಯಿಂದಾಗಿ ವ್ಯತ್ಯಯ ಆಯಿತು. ಈ ವೇಳೆ ಕೆಲವರ ಮನಸ್ಸಿಗೆ ನೋವಾಗಿದೆ. ಇದು ಕೂಡ ನನಗೆ ಬೇಸರ ತಂದಿದೆ. ರಾತ್ರಿ 9.30ರವರೆಗೂ ಉಡುಗೊರೆ ವಿತರಣೆ ನಡೆದಿದೆ’ ಎಂದು ಅವರು ತಿಳಿಸಿದ್ದಾರೆ.