Recent Posts

Saturday, April 25, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಗೋ ಪೂಜೆ ದಿನದಂದೇ ಗೋಕಳ್ಳರ ಪಾಲಿಗೆ ಸಿಂಹಸ್ವಪ್ನರಾದ ದಕ್ಷಿಣ ಕನ್ನಡದ ಪೋಲೀಸರು ; ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿ ಅಬ್ದುಲ್ಲಾನ ಕಾಲಿಗೆ ಗುಂಡು – ಕಹಳೆ ನ್ಯೂಸ್

ಪುತ್ತೂರು : ಗೋ ಪೂಜೆ ದಿನದಂದೇ ಗೋಕಳ್ಳರ ಪಾಲಿಗೆ ದಕ್ಷಿಣ ಕನ್ನಡದ ಪೋಲೀಸರು ಸಿಂಹಸ್ವಪ್ನರಾದ ಘಟನೆ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿ ಅಬ್ದುಲ್ಲಾ (40 ವರ್ಷ), ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದನು ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸ್‌ರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು, ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ. ಆಗ ಪಿಎಸ್ಐ ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ ಒಂದನ್ನು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿರುತ್ತದೆ. ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿ ಯಾಗಿದ್ದಾನೆ. ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನು.

ಆರೋಪಿಯನ್ನು ಚಿಕಿತ್ಸೆಯ ಬಗ್ಗೆ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿದೆ. ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ತನಿಖೆ ನಡೆಸಲಾಗುವುದು.