Monday, April 27, 2026
ದೆಹಲಿಸುದ್ದಿ

ಕರ್ನೂಲ್‌ ಬಸ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಘೋಷಿಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ವದೆಹಲಿ: ಆಂಧ್ರಪ್ರದೇಶದ ಕರ್ನೂಲ್‌ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡು 15 ಮಂದಿ ಸಜೀವ ದಹನರಾಗಿದ್ದು, ಈ ಘಟನೆ ಸಂಬಂಧ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡು ಮೋದಿ ಸಂತಾಪ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಂತಹ ಕಷ್ಟದ ಸಮಯದಲ್ಲಿ ಸಂತ್ರಸ್ತರ ಕುಟುಂಬಗಳ ಜತೆ ನಾವಿದ್ದೇವೆ. ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಎಂದು ಮೋದಿ ತಿಳಿಸಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ನೀಡಲಾಗುವುದು ಹಾಗೂ ಗಾಯಾಳುಗಳಿಗೆ ತಲಾ ₹50 ಸಾವಿರ ಕೊಡಲಾಗವುದು ಎಂದು ಮೋದಿ ಹೇಳಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬಸ್ಸಿನ ಬಾಗಿಲು ಮುಚ್ಚಿಹೋಗಿತ್ತು.ಕೆಲವೇ ನಿಮಿಷಗಳಲ್ಲಿ ಬಸ್‌ ಸಂಪೂರ್ಣವಾಗಿ ಸುಟ್ಟು ಭಸ್ಮವಾಯಿತು. ಬದುಕುಳಿದವರಲ್ಲಿ ಹೆಚ್ಚಿನವರು 25 ರಿಂದ 35 ವರ್ಷ ವಯಸ್ಸಿನವರು ಎಂದು ಪೊಲೀಸರು ತಿಳಿಸಿದ್ದಾರೆ