Saturday, March 14, 2026
ಬೆಂಗಳೂರುರಾಜ್ಯಸುದ್ದಿ

ವಾಯುಭಾರ ಕುಸಿತ: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ -ಕಹಳೆ ನ್ಯೂಸ್

ರಾಜ್ಯದ ಹಲವೆಡೆ ಮತ್ತೆ ರಣಮಳೆ ಮುಂದುವರೆದಿದೆ. ಇನ್ನೂ ಇದೀಗ ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತ ಪರಿಣಾಮ ಮುಂದಿನ 5 ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎನ್ನುವ ಮುನ್ಸೂಚನೆ ಇದೆ.

ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ಹಲವು ದಿನಗಳಿಂದ ನಗರದಲ್ಲಿ ವರುಣ ಆರ್ಭಟಿಸುತ್ತಲಿದ್ದಾನೆ. ಹಾಗೆಯೇ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು

ಇಂದು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ (ಅಕ್ಟೋಬರ್‌ 25) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದು, ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಅಲ್ಲದೆ, ಈ ಭಾಗಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಚನೆ ನೀಡಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಕೆಲವೇ ಕ್ಷಣಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಈ ಭಾಗಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26 ಡಿಗ್ರಿ ಸೆಲ್ಲಿಯಸ್‌ ಮತ್ತು 20 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಕ್ಟೋಬರ್ 27ರವರೆಗೆ ಕರಾವಳಿ ಕರ್ನಾಟಕ ಭಾಗದಲ್ಲಿ ಗಂಟೆಗೆ 35 – 45ರಿಂದ 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಈ ವೇಳೆ ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಶನಿವಾರ ಎಲ್ಲೆಲ್ಲಿ ಮಳೆ?: ಶನಿವಾರ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಾಗಲಕೋಟ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 30ರ ವರೆಗೆ ಮಳೆ: ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಯಾದಗಿರಿ ಜಿಲ್ಲೆಗಳಲ್ಲಿ ಅಕ್ಟೋಬರ್ 30ರ ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದೇ ವೇಳೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಈಗಾಗಲೇ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಅತೀವೃಷ್ಟಿಯಾಗಿರುವ ಘಟನೆಗಳು ನಡೆದಿವೆ