ದುಬೈಗೆ ಹೊರಟಿದ್ದ ಸ್ಪೈಸ್’ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ : ಚೆನ್ನೈನಲ್ಲಿ ತುರ್ತು ಭೂಸ್ಪರ್ಶ.!-ಕಹಳೆ ನ್ಯೂಸ್

ಮಧುರೈನಿಂದ ದುಬೈಗೆ ಹೊರಟಿದ್ದ ಸ್ಪೈಸ್ಜೆಟ್ ವಿಮಾನವು ಶಂಕಿತ ತಾಂತ್ರಿಕ ದೋಷದಿಂದಾಗಿ ಸೋಮವಾರ ಚೆನ್ನೈನಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು ಎಂದು ಮೂಲಗಳು ತಿಳಿಸಿವೆ.
SG23 ವಿಮಾನವು 160 ಪ್ರಯಾಣಿಕರು ಮತ್ತು ಏಳು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಘಟನೆಯ ಬಗ್ಗೆ ವಿಮಾನಯಾನ ಸಂಸ್ಥೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.














