Tuesday, March 10, 2026
ಕ್ರೈಮ್ರಾಜ್ಯಸುದ್ದಿ

ಡಾ.‌ ಕಲ್ಲಡ್ಕ ಪ್ರಭಾಕರ್ ಭಟ್ ರಿಗೆ ಬಿಗ್ ರಿಲೀಫ್..!! ನ್ಯಾಯಾಲಯದಿಂದ ಮಹತ್ವದ ಆದೇಶ – ಕಹಳೆ ನ್ಯೂಸ್

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಆರೆಸ್ಸೆಸ್‌ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ಕುರಿತು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಹತ್ವದ ಮಧ್ಯಂತರ ಆದೇಶ ಮಾಡಿದೆ.

ದಲಿತ ಹಕ್ಕು ಸಮಿತಿ, ಜನವಾದಿ ಮಹಿಳಾ ಸಮಿತಿಯ ದೂರಿನ ಮೇರೆಗೆ ಉಪ್ಪಳಿಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದನೆ ಭಾಷಣದ ಆರೋಪದಲ್ಲಿ ಠಾಣೆಯಲ್ಲಿ ಅಪರಾಧ ಕ್ರಮಾಂಕ 118/2025, ಭಾರತೀಯ ನ್ಯಾಯ ಸಂಹಿತೆ 79, 196, 299, 302 ಹಾಗೂ 3(5) ಕಲಂ ಅಡಿಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ, ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದಲ್ಲಿ ಡಾ. ಪ್ರಭಾಕರ ಭಟ್ ಅರ್ಜಿ ಸಲ್ಲಿಸಿದ್ದು, ಭಟ್ ಪರ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ವಾದ ಮಂಡಿಸಿದ್ದು, ವಾದ ಆಲಿಸಿದ ನ್ಯಾಯಾಲಯವು ಯಾವುದೇ ಬಲವಂತದ ಹಾಗೂ ಒತ್ತಡದ ಕ್ರಮ ಕೈಗೊಳ್ಳದಂತೆ ಪೋಲೀಸ್ ಇಲಾಖೆಗೆ ನಿರ್ದೇಶನ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು