Friday, March 6, 2026
ಕ್ರೀಡೆರಾಜ್ಯರಾಷ್ಟ್ರೀಯಸುದ್ದಿ

ಅಗ್ರಸ್ಥಾನದೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ದಾಖಲೆ ಬರೆದ ರೋಹಿತ್ – ಕಹಳೆ ನ್ಯೂಸ್

ದುಬೈ: ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಐಸಿಸಿ ಪುರುಷರ ಏಕದಿನ ಕ್ರಿಕೆಟ್‌ ರ‍್ಯಾಂಕಿಂಗ್‌ನಲ್ಲಿ ಇದೇ ಮೊದಲ ಬಾರಿಗೆ ನಂ.1 ಸ್ಥಾನ ಅಲಂಕರಿಸಿದ್ದಾರೆ. ರೋಹಿತ್ ತಮ್ಮ 38 ವರ್ಷ 182 ದಿನಗಳ ಬದುಕಿನಲ್ಲಿ ಈ ಸಾಧನೆ ಮಾಡುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಅತ್ಯಂತ ಹಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ಇತ್ತೀಚೆಗೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಶರ್ಮಾ ಎರಡನೇ ಪಂದ್ಯದಲ್ಲಿ 73 ರನ್ ಹಾಗೂ ಅಂತಿಮ ಪಂದ್ಯದಲ್ಲಿ ಅಜೇಯ 121 ರನ್ ಸಿಡಿಸುವ ಮೂಲಕ ಏಕದಿನ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ತಲುಪಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಂತಿಮ ಏಕದಿನ ಪಂದ್ಯದಲ್ಲಿ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ (ಅಜೇಯ 74) ಅವರೊಂದಿಗೆ ಉತ್ತಮ ಇನಿಂಗ್ಸ್ ಕಟ್ಟಿದರು. ಆ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ 33ನೇ ಶತಕವನ್ನು ಪೂರ್ಣಗೊಳಿಸಿದರು.

ಜಾಹೀರಾತು
ಜಾಹೀರಾತು

ಹೊಸದಾಗಿ ಪ್ರಕಟಗೊಂಡ ಐಸಿಸಿ ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್ ಪಟ್ಟಿ

3 ಪಂದ್ಯಗಳ ಆಸ್ಟ್ರೇಲಿಯಾ ಸರಣಿಯಲ್ಲಿ 101ರ ಸರಾಸರಿಯಲ್ಲಿ 202 ರನ್ ಗಳಿಸುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು. ಅವರು ಅಫ್ಗಾನಿಸ್ತಾನದ ಆರಂಭಿಕ ಬ್ಯಾಟರ್ ಇಬ್ರಾಹಿಂ ಝದ್ರಾನ್ ಹಾಗೂ ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್‌ರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದರು.

ಪ್ರಸ್ತುತ ರೋಹಿತ್ ಶರ್ಮಾ ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ 781 ಅಂಕ ಗಳಿಸುವ ಮೂಲಕ ಅಗ್ರಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿರುವ ಝದ್ರಾನ್ 764 ಅಂಕ ಹೊಂದಿದ್ದಾರೆ. ಹಾಗೂ ಮೂರನೇ ಸ್ಥಾನದಲ್ಲಿರುವ ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ 745 ಅಂಕ ಹೊಂದಿದ್ದಾರೆ.

725 ಅಂಕಗಳೊಂದಿಗೆ ವಿರಾಟ್ ಕೊಹ್ಲಿ ಆರು ಹಾಗೂ 700 ಅಂಕ ಹೊಂದಿರುವ ಭಾರತ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ 10ನೇ ಸ್ಥಾನ ಅಲಂಕರಿಸುವ ಮೂಲಕ ಐಸಿಸಿ ಪುರುಷರ ಏಕದಿನ ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ ಅಗ್ರ 10ರೊಳಗೆ ಸ್ಥಾನ ಪಡೆದ ಇತರೆ ಆಟಗಾರರಾಗಿದ್ದಾರೆ.