Recent Posts

Saturday, April 25, 2026
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಬಿ ಸಿ ರೋಡ್ : ಅಂಬ್ಯುಲೆನ್ಸ್‌ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!-ಕಹಳೆ ನ್ಯೂಸ್

ದಿನಾಂಕ 30.10.2025 ರಂದು ಬಿಸಿಲೆ ಘಾಟ್ ಘಾಟ್ ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ KA.22.C.1382 ನೇ ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಸಮಯ ಮದ್ಯಾಹ್ನ 1 30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ಲಿಂದ ಅಂಬ್ಯುಲೆನ್ಸ್ ಮುಂದಿನಿಂದ KA.19.E 0696 ನೇ ದ್ವಿಚಕ್ರ ವಾಹನ ಸವಾರ ಅಂಬ್ಯುಲೆನ್ಸ್ ನ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಅಂಬ್ಯುಲೆನ್ಸ್‌ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ವ್ಯಕ್ತಿಯಾದ ಮಹಮ್ಮದ್ ಮನ್ಸೂರು ಪ್ರಾಯ 38 ವರ್ಷ ಬೆಟ್ಟಂಪಾಡಿ ಗ್ರಾಮ ಪುತ್ತೂರು ತಾಲೂಕು ಎಂಬುವರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 128/2025 ಕಲಂ:110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು