
ಅಹಮದಬಾದ್ ಏರ್ ಇಂಡಿಯಾ ವಿಮಾನ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಯಾಣ ಮಾಡುತ್ತಿದ್ದ ವಿಮಾನ ತುರ್ತು ಭೂಸ್ಪರ್ಶವಾದ ಘಟನೆ ನಡೆದಿದೆ. ಹಾಗಾದ್ರೆ ಎಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ತುರ್ತು ಭೂಸ್ಪರ್ಶವಾಗಿದೆ. ಸಿಲಿಗುರಿಯ ಬಾಗ್ಡೋಗ್ರಾ ಏರ್ಪೋರ್ಟ್‌ನಲ್ಲಿ ಈ ಘಟನೆ ಸಂಭವಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಗುರುವಾರ ಭೂತಾನ್‌ಗೆ ಕರೆದೊಯ್ಯುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿತು ಎಂದು ತಿಳಿದುಬಂದಿದೆ.
ಅಧಿಕೃತ ಭೇಟಿಗಾಗಿ ಥಿಂಪುವಿಗೆ ತೆರಳುತ್ತಿದ್ದ ಅವರು, ಸಿಲಿಗುರಿಯಲ್ಲಿ ಭಾರೀ ಮಳೆ ಮತ್ತು ಕಡಿಮೆ ಒತ್ತಡದ ಹಿನ್ನೆಲೆ ಬಾಗ್ಡೋಗ್ರಾ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಸಬೇಕಾಯಿತು. ನಿನ್ನೆ ರಾತ್ರಿ ಅಲ್ಲಿಯೇ ತಂಗಿದ್ದಾರೆ. ಮೂಲಗಳ ಪ್ರಕಾರ, ಸಚಿವರ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿತು.
ಮೂಲಗಳ ಪ್ರಕಾರ, ಈ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿತು. ಮುಂಜಾಗ್ರತಾ ಕ್ರಮವಾಗಿ ಪೈಲಟ್ ವಿಮಾನವನ್ನು ಬಾಗ್ಡೋಗ್ರಾ ವಿಮಾನ ನಿಲ್ದಾಣಕ್ಕೆ ತಿರುಗಿಸಿದರು. ವಿಮಾನ ನಿಲ್ದಾಣದ ಅಧಿಕಾರಿಗಳು ತುರ್ತು ಶಿಷ್ಟಾಚಾರಗಳನ್ನು ತಕ್ಷಣವೇ ಜಾರಿಗೆ ತಂದಿದ್ದು, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿದರು.
ಸುಪ್ರೀಂ ಕೋರ್ಟ್ ತರಾಟೆ: ಅಹಮದಬಾದ್ ಏರ್ ಇಂಡಿಯಾ ವಿಮಾನ ದುರಂತ ದೇಶವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು. ಬಳಿಕ ಈ ಕುರಿತು ನಡೆಸಿದ ತನಿಖೆ ನಡೆಸಲಾಗಿದ್ದು, ಪ್ರಾಥಮಿಕ ವರದಿಯಲ್ಲಿ ಪೈಲಟ್‌ನನ್ನೇ ಘಟನೆಗೆ ಸಂಪೂರ್ಣ ಹೊಣೆಗಾರನನ್ನಾಗಿ ಮಾಡಲಾಗಿತ್ತು. ಆದರೆ, ಈ ಬಗ್ಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆದುಕೊಂಡು ಖಡಕ್ ಸೋಚನೆಯೊಂದನ್ನು ನೀಡಿದೆ.
ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತ ದುರಂತದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವುದಾಗಿ ಇತ್ತೀಚೆಗಷ್ಟೇ ಹೇಳಿತ್ತು. ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI171 ಜೂನ್ 12ರಂದು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು.
ಈ ವೇಳೆ 260ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡರು. ದುರಂತಕ್ಕೆ ಕೇವಲ ಪೈಲಟ್ನದ್ದೇ ತಪ್ಪು ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯ ಇಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. ಪಿಐಎಲ್ ಮೇರೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ಇತರ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ. ಅಪಘಾತದ ಬಗ್ಗೆ ಸ್ವತಂತ್ರ, ನಿಷ್ಪಕ್ಷಪಾತ ಮತ್ತು ತ್ವರಿತ ತನಿಖೆ ನಡೆಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.













