72ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ನ.16ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು: 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ನ.16ರಂದು ಬೆಳಗ್ಗೆ 10ಗಂಟೆಗೆ ರಾಜ್ಯಮಟ್ಟದ ಸಹಕಾರ ಸಪ್ತಾಹ ಕರಾವಳಿ ಉತ್ಸವ ಮೈದಾನದಲ್ಲಿ ಉದ್ಘಾಟನೆಯಾಗಲಿದೆ ಎಂದು ಸಹಕಾರಿ ರತ್ನ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ ಎಂಬ ವಿಷಯದೊಂದಿಗೆ ಈ ಸಪ್ತಾಹ ನಡೆಯಲಿದ್ದು, ರಾಜ್ಯದಲ್ಲೇ ಈ ಕಾರ್ಯಕ್ರಮವನ್ನು ಮಾದರಿ ಕಾರ್ಯಕ್ರಮವನ್ನಾಗಿಸಲು ಸಿದ್ಧತೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ನೇತತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು, ನವೋದಯ ಗ್ರ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ನಾನಾ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದರು.
ರಾಜ್ಯಮಟ್ಟದ 7 ದಿನದ ಕಾರ್ಯಕ್ರಮಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸಲಾಗುತ್ತಿದೆ. ರಾಜ್ಯ ಮಟ್ಟದ ಸಹಕಾರ ಸಪ್ತಾಹ ಆಚರಣೆಯ ಸಮಾರಂಭವನ್ನು ರಾಜ್ಯ ವಿಧಾನಸಭಾಧ್ಯಕ್ಷ ಯು. ಟಿ. ಖಾದರ್ ಫರೀದ್ ಇವರು ಉದ್ಘಾಟಿಸಲಿರುವರು. ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.ಬೆಂಗಳೂರು ಇದರ ಅಧ್ಯಕ್ಷ ಜಿ.ಟಿ. ದೇವೇಗೌಡ ಉತ್ತಮ ಸ್ವ-ಸಹಾಯ ಸಂಘ ಪುರಸ್ಕಾರ, ಶಾಸಕರು, ಮಾಜಿ ಸಹಕಾರ ಸಚಿವರಾದ ಕೆ. ಎನ್. ರಾಜಣ್ಣ ವಸ್ತುಪ್ರದರ್ಶನ ಮಳಿಗೆಗಳ ಉದ್ಘಾಟನೆ, ದ.ಕ. ಸಂಸದ ಕಾ.ಬ್ರಿಜೇಶ್ ಚೌಟ ಸಹಕಾರ ಸಪ್ತಾಹದ ಧ್ವಜಾರೋಹಣ ನೆರವೇರಿಸಲಿ ರುವರು. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದಾರೆ ಎಂದು ವಿವರಿಸಿದರು














