Saturday, March 7, 2026
ಸುದ್ದಿ

ಲಂಡನ್‌ಗೆ ತೆರಳುತ್ತಿದ್ದ ರೈಲಿನಲ್ಲಿ 10 ಜನರಿಗೆ ಚಾಕು ಇರಿತ : ಇಬ್ಬರು ಆರೋಪಿಗಳ ಬಂಧನ

ಲಂಡನ್‌: ಲಂಡನ್‌ಗೆ ಪ್ರಯಾಣಿಸುತ್ತಿದ್ದ ರೈಲಿನಲ್ಲಿ 10 ಪ್ರಯಾಣಿಕರಿಗೆ ಮನಬಂದಂತೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಇಬ್ಬರು ಆರೋಪಿಗಳನ್ನು ಯುಕೆ ಪೊಲೀಸರು ಬಂಧಿಸಿದ್ದಾರೆ.

ಘಟನೆಯಲ್ಲಿ 10 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಲ್ಲಿ ಒಂಬತ್ತು ಮಂದಿ ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ. ಕೇಂಬ್ರಿಡ್ಜ್‌ಶೈರ್‌ನ ಪೂರ್ವ ಗ್ರಾಮೀಣ ಪಟ್ಟಣವಾದ ಹಂಟಿಂಗ್‌ಡನ್‌ನಲ್ಲಿರುವ ರೈಲ್ವೆ ನಿಲ್ದಾಣದಲ್ಲಿ, ಸಾಮೂಹಿಕ ಚಾಕು ಇರಿತ ಸುದ್ದಿ ತಿಳಿಯುತ್ತಿದ್ದಂತೆ ರೈಲು ನಿಂತಿತು. ರೈಲನ್ನು ಪೊಲೀಸರು ಸುತ್ತುವರಿದು, ಇರಿತಕ್ಕೊಳಗಾದವರನ್ನು ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರೈಲು ಈಶಾನ್ಯದ ಡಾನ್‌ಕಾಸ್ಟರ್‌ನಿಂದ ಲಂಡನ್‌ನ ಕಿಂಗ್ಸ್ ಕ್ರಾಸ್ ನಿಲ್ದಾಣಕ್ಕೆ ಚಲಿಸುತ್ತಿತ್ತು ಎಂದು ಸಾರಿಗೆ ಪೊಲೀಸರು ತಿಳಿಸಿದ್ದಾರೆ. ಈ ಮಾರ್ಗವು ಹೆಚ್ಚಾಗಿ ಪ್ರಯಾಣಿಕರಿಂದ ತುಂಬಿರುತ್ತದೆ. ದೊಡ್ಡ ಚಾಕುವನ್ನು ಹಿಡಿದ ವ್ಯಕ್ತಿಯನ್ನು ನೋಡಿರುವುದಾಗಿ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ರೈಲು ನಿಂತ ನಂತರ ಪ್ಲಾಟ್‌ಫಾರ್ಮ್‌ನಲ್ಲಿ ದೊಡ್ಡ ಚಾಕು ಹಿಡಿದಿದ್ದ ವ್ಯಕ್ತಿಯನ್ನು ನೋಡಿದ್ದೇವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ನಂತರ ಪೊಲೀಸರು ಆ ವ್ಯಕ್ತಿಯನ್ನು ಎಳೆದು ಹಿಡಿದು ತಡೆದಿದ್ದಾರೆ ಎಂದು ಅವರು ವಿವರಿಸಿದ್ದಾರೆ.