Recent Posts

Saturday, April 25, 2026
ಕೊಡಗುಬೆಂಗಳೂರುಮಡಿಕೇರಿರಾಜ್ಯಸುದ್ದಿ

ಚೇನಂಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ರೂ. ಅನುದಾನ ಘೋಷಿಸಿದ ಸಿಎಂ – ಕಹಳೆ ನ್ಯೂಸ್

ಬೆಂಗಳೂರು – ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಗೃಹ ಕಚೇರಿ ಕೃಷ್ಣದಲ್ಲಿ ಚೇನಂಡ ಹಾಕಿ ಪಂದ್ಯಾವಳಿಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸೌಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ ಸಂಸ್ಕೃತಿಯ ಹೆಮೆ. 2026ರ ಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದು ಅವರು ಭರವಸೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಮತ್ತು ಸಚಿವರಾದ ಬೋಸರಾಜು, ಬೈರತಿ ಸುರೇಶ್‌ ಮತ್ತು ಶಿವರಾಜ್‌ ತಂಗಡಗಿ ಸೇರಿ ಕೊಡವ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.