
ಬಸ್ ಮೇಲೆ ಜಲ್ಲಿಕಲ್ಲು ತುಂಬಿದ್ದ ಟಿಪ್ಪರ್ ಮಗುಚಿಬಿದ್ದು ಅಪಘಾತ ಸಂಭವಿಸಿದೆ. ತೆಲಂಗಾಣದ ಸರ್ಕಾರಿ ಬಸ್ ನಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ 17 ಜನ ಸಾವ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಟಿಪ್ಪರ್ ಚಾಲಕನ ಅತಿವೇಗವೇ ಅಪಘಾತಕ್ಕೆ ಕಾರಣವಾಗಿದೆ. ಟಿಪ್ಪರ್ ಮಗುಚಿದ್ದರಿಂದ ಬಸ್ ನಲ್ಲಿ ಜಲ್ಲಿಕಲ್ಲುಗಳು ತುಂಬಿಕೊಂಡಿವೆ. ಗಾಯಗೊಂಡ ಹಲವರ ಸ್ಥಿತಿ ಚಿಂತಾಜನಕವಾಗಿದೆ.









