Saturday, March 7, 2026
ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಶಿವಮೊಗ್ಗದಲ್ಲಿ ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ! -ಕಹಳೆ ನ್ಯೂಸ್

ಶಿವಮೊಗ್ಗ : ಶಿವಮೊಗ್ಗದಲ್ಲಿ ದುರಂತವೊಂದು ಸಂಭವಿಸಿದ್ದು, ಇಲ್ಲಿನ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ.

ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಟೆರೇಸ್‌ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೇ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು

ವಿದ್ಯಾರ್ಥಿನಿ ವನಿಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಕಾರಣ ತಿಳಿದು ಬಂದಿಲ್ಲ. ವನಿಷಾ, ಡಿವಿಎಸ್‌ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ಪದವಿ ಓದುತ್ತಿದ್ದರು. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ