ಉಡುಪಿಯಲ್ಲಿ ಮಾಧ್ವ ಬ್ರಾಹ್ಮಣ ಸಾಂಪ್ರದಾಯದಂತೆ, ಸ್ಯಾಂಡಲ್ ವುಡ್ ಖಳನಟ ಹರೀಶ್ ರಾಯ್ ಅಂತ್ಯಕ್ರಿಯೆ- ಕಹಳೆ ನ್ಯೂಸ್

ಉಡುಪಿ : ಸ್ಯಾಂಡಲ್ವುಡ್ ಖಳನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ರಾಯ್ (55) ನಿಧಾನರಾದರು. ಇದೀಗ ಉಡುಪಿಯಲ್ಲಿ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಹರೀಶ್ ರಾಯ್ ಅವರ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆಯಲ್ಲಿ ಹರೀಶ್ ಆಚಾರ್ಯ ಆಪ್ತರು, ಕುಟುಂಬದವರು ಭಾಗಿಯಾಗಿದ್ದರು.
ʻಕೆಜಿಎಫ್ʼ ಸಿನಿಮಾದಲ್ಲಿ ʻಕೆಜಿಎಫ್ ಚಾಚಾʼ ಎಂದೇ ಖ್ಯಾತರಾದ ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್ ರಾಯ್ (55) ನಿನ್ನೆ ನಿಧನರಾಗಿದ್ದಾರೆ. ಅವರು ಥೈರಾಯ್ಡ್ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ನಿಧನರಾಗಿದ್ದಾರೆ ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿರುವ ಇವರು ಕನ್ನಡ ಮಾತ್ರವಲ್ಲದೆ, ತಮಿಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಶಿವರಾಜ್ ಕುಮಾರ್ ಅಭಿನಯದ ‘ಓಂ’ ಚಿತ್ರದಲ್ಲಿನ ‘ರಾಯ್’ ಪಾತ್ರದಿಂದ ಗಮನ ಸೆಳೆದ ಇವರು, ಸಾಕಷ್ಟು ಚಿತ್ರಗಳಲ್ಲಿ ಖಳನಟನಾಗಿ, ಪೋಷಕ ನಟನಾಗಿ ಕಾರ್ಯ ನಿರ್ವಹಿಸಿದ್ದಾರೆ.
ಬೆಂಗಳೂರು ಅಂಡರ್ ವರ್ಲ್ಡ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್ವುಡ್ನ ಟಾಪ್ ಸಿನಿಮಾ ಕೆಜಿಎಫ್ ಚಾಪ್ಟರ್ 1 ಹಾಗೂ ಕೆಜಿಎಫ್ ಚಾಪ್ಟರ್ 2ರಲ್ಲಿ ಅಭಿನಯಿಸಿದ್ದಾರೆ. ಕೆಜಿಎಫ್, ಓಂ, ಮೆಜೆಸ್ಟಿಕ್, ಜೋಡಿಹಕ್ಕಿ, ಚಕ್ರವರ್ತಿ, ಕಾಶಿ, ಸಂಜು ವೆಡ್ಸ್ ಗೀತಾ ಹಾಗು ನಲ್ಲ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.













