Friday, April 24, 2026
ಸುದ್ದಿ

ಮೀನು ಹಿಡಿಯಲು ಹೋಗಿದ್ದಾಗ ದುರಂತ: ಕರೆಂಟ್ ಶಾಕ್ ಹೊಡೆದು ಮಹಿಳೆ ದುರ್ಮರಣ-ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿರುವ ದಾರುಣ ಅಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ದ್ದುವನೆಟ್ಟ ಗ್ರಾಮದಲ್ಲಿ ನಡೆದಿದೆ.

ಅಶಾಬಿ (54) ಮೃತ ದುರ್ದವಿ, ಅಶಾಬಿ ಹಾಗೂ ಪತಿ ಮಾಬುಸಾಬ್ ಮೀನು ಹಿಡಿದು ಜೀವನ ನಡೆಸುತ್ತಿದ್ದರು. ಕೆರೆಯಲ್ಲಿ ಬಲೆ ಹಾಕಿ ಮೀನು ಹಿಡಿಯುವಾಗ ಕೆರೆಯಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ. ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು