Recent Posts

Sunday, April 26, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕಾರು ಮತ್ತು ಆಟೋ ನಡುವೆ ಅಪಘಾತ ; ಮೂವರಿಗೆ ಗಾಯ – ಕಹಳೆ ನ್ಯೂಸ್

ಪುತ್ತೂರು: ಕಾರು ಮತ್ತು ಆಟೋ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡಿರುವ ಘಟನೆ ಮಂಜಲ್ಪಡ್ಪು ಎಂಬಲ್ಲಿ ನಡೆದಿದೆ.

ಟೋ ಚಾಲಕ, ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಪಜೀರ್ ನಿವಾಸಿ, ಸುನಿಲ್ ಪಿಂಟೋ(37), ಪಜೀರ್ ನಿವಾಸಿಗಳಾದ ಉಸ್ಮಾನ್(57) ಮತ್ತು ವಿದ್ಯಾರ್ಥಿನಿ ಫಾತಿಮತ್ ಮುರ್ಷಿದಾ(17) ಗಾಯಾಳುಗಳು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸುನಿಲ್ ಮತ್ತು ಉಸ್ಮಾನ್ ಅವರ ಕಾಲುಗಳಿಗೆ ತೀವ್ರ ಏಟು ತಗುಲಿದ್ದು, ಮುರ್ಷಿದಾ ಅವರ ತಲೆಗೆ ಗಾ*ಯವಾಗಿದೆ. ಮೂವರಿಗೂ ಪುತ್ತೂರಿನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪಜೀರ್‌ನಿಂದ ಆಟೋ ಬಾಡಿಗೆಗೆ ಗೊತ್ತು ಮಾಡಿಕೊಂಡು ಔಷಧಕ್ಕೆಂದು ಬಂದಿದ್ದ ಉಸ್ಮಾನ್ ಮರಳುವಾಗ ಪುತ್ತೂರು ಹೊರವಲಯದ ಕುಂಬ್ರದ ಶಿಕ್ಷಣ ಸಂಸ್ಥೆಯೊಂದರಲ್ಲಿ ಕಲಿಯತ್ತಿರುವ ತನ್ನ ಮೊಮ್ಮಗಳು ಮುರ್ಷಿದಾಳನ್ನು ಕೂರಿಸಿಕೊಂಡು ಪಜೀರ್‌ನತ್ತ ಹೋಗುತ್ತಿದ್ದರು.