Tuesday, March 10, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶೀಘ್ರದಲ್ಲಿಯೇ ಮುಳಿಹಿತ್ಲು ರಸ್ತೆ ಅಗಲೀಕರಣ : ಶಾಸಕ ಕಾಮತ್ -ಕಹಳೆ ನ್ಯೂಸ್

ಮಂಗಳೂರು: ಮ.ನ.ಪಾ. ವ್ಯಾಪ್ತಿಯ 58 ನೇ ಬೋಳಾರ ವಾರ್ಡಿನ ಮುಳಿಹಿತ್ಲುವಿನಲ್ಲಿ ಸುಮಾರು ಎರಡು ಕೋಟಿ ವೆಚ್ಚದಲ್ಲಿ ರಸ್ತೆ ಅಗಲೀಕರಣ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ರಸ್ತೆ ಅಗಲೀಕರಣದ ಅವಶ್ಯಕತೆ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯರು, ಸಾರ್ವಜನಿಕರು, ಹಲವು ಸಮಯದಿಂದ ಬೇಡಿಕೆಯಿಟ್ಟಿದ್ದರು. ಆ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ ಪಾಲಿಕೆಯ ಪ್ರೀಮಿಯಂ ಎಫ್.ಎ.ಆರ್ ಅನುದಾನವನ್ನು ಬಳಸಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿಯೂ ತೊಂದರೆಯಾಗದಂತೆ ಶೀಘ್ರದಲ್ಲಿ ಕಾಮಗಾರಿ ಮುಗಿಸುವಂತೆ ಸೂಚನೆ ನೀಡಿದ್ದೇನೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಾಜಿ ಉಪ ಮೇಯರ್ ಭಾನುಮತಿ ಪಿ.ಎಸ್, ನಿಕಟಪೂರ್ವ ಪಾಲಿಕೆ ಸದಸ್ಯೆ ರೇವತಿ ಶೆಟ್ಟಿ, ಸ್ಥಳೀಯ ಬಿಜೆಪಿ ಪ್ರಮುಖರಾದ ದೀಪಕ್ ಪೈ, ಅಮಿತ್ ಶೆಟ್ಟಿ, ಪ್ರಸಾದ್ ಬೋಳಾರ, ಉಮಾನಾಥ ಕೋಟೆಕಾರ್, ಗಿರೀಶ್ ಶೆಟ್ಟಿ, ದಿನೇಶ್ ಶೆಟ್ಟಿ, ಕೇಶವ ಶೆಟ್ಟಿ, ಸುಜಾತ ಆಳ್ವ, ಜಯಶ್ರೀ, ಶಬರಿ ಶೆಟ್ಟಿ, ಜಯಶ್ರೀ ಕೊಟ್ಟಾರಿ, ಗಾಯತ್ರಿ, ವಿವೇಕ್ ಶೆಟ್ಟಿ, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಪರಿಸರದ ನಾಗರಿಕರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು