
ಬಿಹಾರ: ಮನೆಯ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಬಿಹಾರದ ಸರನ್ ಜಿಲ್ಲೆಯ ಮಾನಸ್ ಗ್ರಾಮದಲ್ಲಿ ರವಿವಾರ ನಡೆದಿದೆ.
ಮಾಹಿತಿ ಪಡೆದ ತಕ್ಷಣ, ಪೊಲೀಸ್ ತಂಡ ಸ್ಥಳಕ್ಕೆ ತಲುಪಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಸರನ್ ಎಸ್‌ಎಸ್‌ಪಿ ಕುಮಾರ್ ಆಶಿಶ್ ಮಾಹಿತಿ ನೀಡಿದ್ದಾರೆ.
ಸ್ಥಳೀಯರು ಹೇಳುವಂತೆ ಮನೆ 30 ವರ್ಷಗಳಿಗಿಂತಲೂ ಹಳೆಯದಾಗಿದ್ದು, ಉತ್ತಮ ಸ್ಥಿತಿಯಲ್ಲಿರಲಿಲ್ಲ ಎಂದು ತಿಳಿದುಬಂದಿದೆ.
ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಪೊಲೀಸರಿಗೆ ಮನವಿ ಮಾಡಲಾಗಿದೆ. ಪೊಲೀಸರು ಘಟನೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಜಿಲ್ಲಾಡಳಿತಕ್ಕೆ ಕಳುಹಿಸಿದ್ದಾರೆ ಎಂದು ಅಧಿಕಾರಿ ಹೇಳಿದರು.














