Saturday, March 7, 2026
ಉಡುಪಿಕಾಪುಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಶ್ರೀ ವಿಷ್ಣುಮೂರ್ತಿ ಹಯವದನ ಸ್ವಾಮಿ ಪದವಿ ಪೂರ್ವ ಕಾಲೇಜು ಇನ್ನಂಜ್ ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಶ್ರೀ ವಿಷ್ಣುಮೂರ್ತಿ ಹಯವದನ ಸ್ವಾಮಿ ಪದವಿ ಪೂರ್ವ ಕಾಲೇಜು ಇನ್ನಂಜ್ ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ರಾಜೇಂದ್ರ ಪ್ರಭು ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಕೇಶ್ ಕುಂಜುರು ಪತ್ರಕರ್ತರು ಕಾಪು ತಾಲೂಕು ಇವರು ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿ ಗಳ ಪಾತ್ರದ ಬಗ್ಗೆ ತಿಳಿಸುತ್ತಾ,ಮದ್ಯಪಾನ , ದುಮಪಾನ, ಡ್ರಗ್ಸ್, ಮೊಬೈಲ್ ಬಳಕೆಯಿಂದ ಆರೋಗ್ಯದಲ್ಲಗುವ ದುಷ್ಪರಿಣಾಮ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ನವೀನ್ ಅಮೀನ್ ರವರು ದುಶ್ಚಟ ದಿಂದ ಮಕ್ಕಳ ಮೇಲೆ ಆಗುವ ಪರಿಣಾಮ ದ ಬಗ್ಗೆ ತಿಳಿಸಿದರು.
ಕಾರ್ಯ ಕ್ರಮವನ್ನೂ ತಾಲೂಕು ಕೃಷಿ ಮೇಲ್ವಿಚಾರಕರಾದ ದೇವೇಂದ್ರ ನಿರೂಪಿಸಿದರು,ಸೇವಪ್ರತಿನಿಧಿ ಶ್ರೀಮತಿ ಯಶೋದಾ ಸ್ವಾಗತ ಕೋರಿದರು. ಕಾಲೇಜು ವಿದ್ಯಾರ್ಥಿ ಗಳು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು