Friday, April 24, 2026
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಬ್ಬು ಬೆಳೆಗಾರರ ​​ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: BJP-JDS ಕಿಡಿ – ಕಹಳೆ ನ್ಯೂಸ್

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿದ್ದಾರೆಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ತೀವ್ರವಾಗಿ ಕಿಡಿಕಾರಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು, ಕಬ್ಬು ಬೆಳೆಗಾರರ ಸಂಕಷ್ಟ ಬಿಗಡಾಯಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮುಧೋಳದ ಸಕ್ಕರೆ ಕಾರ್ಖಾನೆಯ ಯಾರ್ಡ್‌ʼನಲ್ಲಿ ನಿಂತಿದ್ದ ಕಬ್ಬು ತುಂಬಿದ್ದ ಟ್ರಾಕ್ಟರುಗಳು ಬೆಂಕಿಗೆ ಆಹುತಿ ಆಗಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಟೀಕಿಸಿದರು.

ಬೆಳಗಾವಿಯಲ್ಲಿ ರೈತರು ಹೋರಾಟಕ್ಕಿಳಿದಾಗ ಆ ಕ್ಷಣಕ್ಕೇನೋ ಅವರ ಮೂಗಿಗೆ ತುಪ್ಪ ಸವರಿದ ಸರ್ಕಾರ, ಇಡೀ ಕಬ್ಬು ಬೆಳೆಗಾರರ ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ಘೋರ ವೈಫಲ್ಯ ಕಂಡಿತು. ಅದರ ಪರಿಣಾಮವೇ ಮುಧೋಳದಲ್ಲಿ ರೈತರ ತಾಳ್ಮೆಯ ಕಟ್ಟೆಯೊಡೆಯುಂತೆ ಮಾಡಿದೆ ಎಂದು ಹೇಳಿದರು.

ಅಕ್ಕಿ ಮೇಲೆ ಆಸೆ, ನೆಂಟರ ಮೇಲೆ ಪ್ರೀತಿ ಅನ್ನುವ ಲಾಭಕೋರ ಧೋರಣೆಯನ್ನು ಸರ್ಕಾರ ಬಿಡಬೇಕು. ರೈತರ ಸಂಕಷ್ಟವನ್ನು ಅಧಿಕಾರದ ಅಮುಲುಗಣ್ಣಿನಿಂದ ನೋಡಬಾರದು. ಹೃದಯ ವೈಶಾಲ್ಯದಿಂದ ಕಾಣುವ ಔದಾರ್ಯ ತೋರಬೇಕು. ಮುಧೋಳದ ರೈತರ ಜತೆ ನಾನೂ ಇದ್ದೇನೆಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರತಿಕ್ರಿಯಿಸಿ, ಕಬ್ಬು ರೈತರು ಎದುರಿಸುತ್ತಿರುವ ಬಿಕ್ಕಟ್ಟಿಗೆ ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿದರು.

ರೈತರ ಬೇಡಿಕೆಗಳು ನ್ಯಾಯಯುತವಾಗಿವೆ. ಮುಖ್ಯಮಂತ್ರಿಗಳು ತಕ್ಷಣ ರೈತ ಸಂಘಟನೆಗಳೊಂದಿಗೆ ಮಾತುಕತೆ ನಡೆಸಿ ಅವರ ಬೇಡಿಕೆಗಳನ್ನು ವಿಳಂಬವಿಲ್ಲದೆ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.