Monday, April 27, 2026
ಸುದ್ದಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರ್ಕಾರದ ವಿರುದ್ಧ ಆಕ್ರೋಶ – ಕಹಳೆ ನ್ಯೂಸ್

ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ಬಂದ್ ಗೆ ಉತ್ತಮ‌ ಪ್ರತಿಕ್ರಿಯೆ ವ್ಯಕ್ತವಾಗಿದೆ.‌

ಮುಂಜಾನೆಯಿಂದಲೇ ಅಂಗಡಿ‌ ಮುಂಗಟ್ಟುಗಳಿಗೆ ಬೀಗ ಹಾಕಿ ವರ್ತಕರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಗರದೆಲ್ಲೆಡೆ ಆಟೋ‌ ಇನ್ನೀತರ ವಾಹನ ಸಂಚಾರ ಸಹ ಬಂದ್ ಮಾಡಲಾಗಿತ್ತು.‌

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ರೈತ ಸಂಘಟನೆ ಹಾಗೂ ಇನ್ನೀತರ ಪ್ರಗತಿ‌ಪರ ಸಂಘಟನೆಗಳು ಹಾಗೂ ಜನ ಪ್ರತಿನಿಧಿಗಳು ಸೇರಿದಂತೆ ಸಾವಿರಾರು ಜನ ಪ್ರತಿಭಟನಾಕಾರರು ಬಾಳೆಹೊನ್ನೂರು ಪಟ್ಟಣ್ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದರು.‌

ಈ ವೇಳೆ ಪ್ರತಿಭಟನಾಕಾರರು ಕಸ್ತೂರಿ ರಂಗನ್ ವರದಿ ಅನುಷ್ಟಾನಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ಘೋಷಣೆಗಳನ್ನು ಕೂಗಿದ್ರು ಅಲ್ಲದೇ ಕಸ್ತೂರಿ ರಂಗನ್ ವರದಿ ಅನುಷ್ಟಾನಗೊಳಿಸಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.