Wednesday, March 11, 2026
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ರಿಕ್ಷಾಕ್ಕೆ ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು…!!

ಮಂಗಳೂರು: ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.

ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಅಪ್ಪಳಿಸಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಿಂದ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.