ನಿಟ್ಟಡೆ ಗ್ರಾಮದ ಪಾಣೂರು ಗುರುನಾರಾಯಣ ಸರ್ಕಲ್ ಬಳಿ ನಿಲ್ಲಿಸಿದ್ದ ಬೈಕನ್ನು ಕಳವು ಮಾಡಿದ ಇಬ್ಬರು ಆರೋಪಿಗಳ ಬಂಧನ -ಕಹಳೆ ನ್ಯೂಸ್

ಬೆಳ್ತಂಗಡಿ: ನಿಟ್ಟಡೆ ಗ್ರಾಮದ ಪಾಣೂರು ಗುರುನಾರಾಯಣ ಸರ್ಕಲ್ ಬಳಿ ಪೆಟ್ರೋಲ್ ಖಾಲಿಯಾದ ಹಿನ್ನೆಲೆಯಲ್ಲಿ ನಿಲ್ಲಿಸಿದ್ದ ಬೈಕನ್ನು ಕಳವು ಮಾಡಿದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ವೇಣೂರು ಗ್ರಾಮದ ಕೆರೆಕೋಡಿ ನಿವಾಸಿ ಮಹಮ್ಮದ್ ಇರ್ಷಾದ್ (25) ಹಾಗೂ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ ಸಾದಿಕ್ ಖಾನ್ (26) ಬಂಧಿತರು. ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ನ. 11ರಂದು ರಾತ್ರಿ ಕುಕ್ಕೇಡಿ ನಿವಾಸಿ ಸಂಪತ್ ಕುಮಾರ್ ತನ್ನ ಬೈಕಿನಲ್ಲಿ ಪೆಟ್ರೋಲ್ ಖಾಲಿಯಾದ ಕಾರಣ ಪಾಣೂರಿನಲ್ಲಿ ಇಟ್ಟು ಹೋಗಿದ್ದರು. ಮರುದಿನ ಹೋದಾಗ ನಾಪತ್ತೆಯಾಗಿತ್ತು. ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನ. 20ರಂದು ವೇಣೂರು ಠಾಣೆಯ ಪಿಎಸ್‌ಐ ಓಮನ ಮತ್ತು ಸಿಬಂದಿ ವೇಣೂರಿನ ಕೆರೆಕೋಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಇಬ್ಬರು ಯುವಕರು ನೋಂದಣಿ ಸಂಖ್ಯೆ ಇಲ್ಲದ ಬೈಕಿನಲ್ಲಿ ಬಂದರು. ತಡೆದು ತಪಾಸಣೆ ಮಾಡಿದಾಗ ಯಾವುದೇ ದಾಖಲೆ ಇರಲಿಲ್ಲ. ಠಾಣೆಗೆ ಕರೆಸಿ ವಿಚಾರಿಸಿದಾಗ ಕಳವು ಮಾಡಿರುವ ಬೈಕ್ ಎಂದು ತಿಳಿದುಬಂದಿದೆ.













