ವೀರಕಂಭ ಗ್ರಾಮದ ಎರ್ಮೆಮಜಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ – ಕಹಳೆ ನ್ಯೂಸ್

ಕಲ್ಲಡ್ಕ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ, ಬಾಲವಿಕಾಸ ಸಮಿತಿ ಎರ್ಮೆಮಜಲು ಅಂಗನವಾಡಿ ಕೇಂದ್ರ, ವತಿಯಿಂದ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಎರ್ಮೆಮಜಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಹರಿಣಾಕ್ಷಿ ವಹಿಸಿದ್ದರು. ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ ಗೊಳಿಮಾರ್, ಪಂಚಾಯತ್ ಸದಸ್ಯರಾದ ಲಕ್ಷ್ಮಿ ಎಸ್, ಸಂಜೀವಿನಿ ಒಕ್ಕೂಟದ,ಎಲ್ ಸಿ ಆರ್ ಪಿ ಗಳಾದ ಜಯಂತಿ,,ರೂಪಶ್ರೀ, ಸಂಜೀವಿನಿ ಒಕ್ಕೂಟ ಉಪಾಧ್ಯಕ್ಷೆ ಆಶಾಲತಾ, ,ಆಶಾ ಕಾರ್ಯಕರ್ತೆ ಕೋಮಾಲಾಕ್ಷಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೀರಕಂಬ ಒಕ್ಕೂಟ ಅಧ್ಯಕ್ಷ ಶಾಂಭವಿ ಆಚಾರ್ಯ, ಚಿನ್ನಾ ಕಲ್ಲಡ್ಕ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಕ್ಕಳ ದಿನಾಚರಣೆ ಪ್ರಯುಕ್ತ ಮಾಡಿದ ವಿವಿಧ ಸ್ಪರ್ಧೆಯ ಬಹುಮಾನಗಳನ್ನು ನೀಡಿಲಾಯಿತು.
ಈ ಸಂದರ್ಭದಲ್ಲಿ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಿತು. ಬಾಲವಿಕಾಸ ಸಮಿತಿ ಸದಸ್ಯರು, ಮಕ್ಕಳ ಪೋಷಕರು, ನಂದಾದೀಪ ಮತ್ತು ಅಂಬಾ ಭವಾನಿ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಯುವ ಕೇಸರಿ ಹಾಗೂ ಸ್ವಸ್ತಿಕ್ ಫ್ರೆಂಡ್ಸ್ ಸಂಘದ ಸದಸ್ಯರು ಭಾಗವಹಿಸಿದ್ದರು ಭಾಗವಹಿಸಿದ್ದರು.
ಅಂಗನವಾಡಿ ಕಾರ್ಯಕರ್ತೆ ಮೀನಾಕ್ಷಿ ಸ್ವಾಗತಿಸಿ, ಅಂಗನವಾಡಿ ಸಹಾಯಕಿ ಮಮತಾ ಸಹಕರಿಸಿದರು.














