Friday, March 6, 2026
ಕ್ರೈಮ್ಬೆಂಗಳೂರುರಾಜ್ಯಸುದ್ದಿ

7 ಕೋಟಿ ಹಣ ದರೋಡೆ ಪ್ರಕರಣ : ಮತ್ತೊಬ್ಬ ಆರೋಪಿ ಅರೆಸ್ಟ್, ಬಂಧಿತರ ಸಂಖ್ಯೆ 7ಕ್ಕೆ – ಕಹಳೆ ನ್ಯೂಸ್

ಬೆಂಗಳೂರು -ಹಾಡುಹಗಲೇ ನಗರದಲ್ಲಿ 7 ಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ವಿಭಾಗದ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ರಾಕೇಶ್‌ ಬಂಧಿತ ಏಳನೇ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಟ್ರಾವೆಲ್ಸ್ ಮಾಲೀಕ, ದರೋಡೆ ಕೃತ್ಯದ ಪ್ರಮುಖ ಆರೋಪಿ ರವಿಯ ಸಂಬಂಧಿ.

ಬಂಧಿತರ ಸಂಖ್ಯೆ 7ಕ್ಕೇರಿದ್ದು, ತಲೆ ಮರೆಸಿಕೊಂಡಿರುವ ಮತ್ತಿಬ್ಬರ ಬಂಧನಕ್ಕಾಗಿ ಪೊಲೀಸರು ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು ರಾಜ್ಯಗಳಲ್ಲಿ ಶೋಧ ನಡೆಸುತ್ತಿದ್ದಾರೆ. ಬಂಧಿತರಿಂದ ಈತನಕ ಒಟ್ಟು 6.29 ಕೋಟಿ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ 80 ಲಕ್ಷ ರೂ. ನಗದು ಎಲ್ಲಿದೆ ಎಂಬುದನ್ನು ಪೊಲೀಸರು ತೀವ್ರ ತಪಾಸಣೆ ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ದರೋಡೆ ಪ್ರಕರಣ ದಾಖಲಾಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ನಗರ ಪೊಲೀಸರು 52 ಗಂಟೆಗಳಲ್ಲಿ ಮೂವರನ್ನು ಬಂಧಿಸಿದ್ದರು. ನಂತರ ಹೈದರಾಬಾದ್‌ನಲ್ಲಿ ಇನ್ನೂ ಮೂವರನ್ನು ಬಂಧಿಸಿ ದರೋಡೆ ಮಾಡಿದ್ದ ಹಣ ವಶಪಡಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು

ಬಂಧಿತರಾಗಿರುವ 7 ಆರೋಪಿಗಳನ್ನು ದಕ್ಷಿಣ ವಿಭಾಗದ ಪೊಲೀಸರು ವಿಚಾರಣೆಗೆ ಒಳಪಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಪರಾರಿಯಾಗಿರುವ ಇನ್ನಿಬ್ಬರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸ್‌‍ ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.