
ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಹ್ವಾನಿಸಿದ್ದಾರೆ.
ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ನಮಗೆ ಬ್ರೇಕ್ ಫಾಸ್ಟ್ ಇಲ್ಲ, ಏನೂ ಇಲ್ಲ, ಗೊಂದಲ ಇರಬಾರದು ಅಂತಾ ಹೈಕಮಾಂಡ್ ಇಚ್ಚೆಸಿದೆ.
ಹೀಗಾಗಿ ಗೊಂದಲಗಳ ನಿವಾರಣೆ ಬಗ್ಗೆ ಚರ್ಚಿಸಬಹುದು ಎಂದು ಹೇಳಿದ್ದಾರೆ.
ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್
ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ.
ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ. ಹೈಕಮಾಂಡ್ ನವರು ನವದೆಹಲಿಗೆ ಕರೆದರೆ ಹೋಗುತ್ತೇನೆ ಎಂದರು.














