Tuesday, September 8, 2026
ಬೆಂಗಳೂರುರಾಜ್ಯಸುದ್ದಿ

ಸಿದ್ದರಾಮಯ್ಯ – ಡಿಕೆ ಶಿವಕುಮಾರ್‌ ಬ್ರೇಕ್ ಫಾಸ್ಟ್ ಮೀಟಿಂಗ್; ಹೈಕಮಾಂಡ್ ಖಡಕ್‌ ಸೂಚನೆ ಮೇರೆಗೆ ಮಹತ್ವದ ಸಭೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸದ್ಯ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಖಡಕ್‌ ಸೂಚನೆಯ ಮೇರೆಗೆ ಇಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ.

ಜಾಹೀರಾತು

ಕಳೆದ ಒಂದು ತಿಂಗಳಿನಿಂದ ಅಧಿಕಾರ ಹಂಚಿಕೆ ವಿಚಾರವಾಗಿ ಸಿದ್ದರಾಮಯ್ಯ ಬಣ ಹಾಗೂ ಡಿ ಕೆ ಶಿವಕುಮಾರ್‌ ಅವರ ಬಣದ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಇಂದು ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಭೇಟಿ ಸಾಕಷ್ಟು ಮಹತ್ವವನ್ನ ಪಡೆದುಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹೌದು,ಕಾಂಗ್ರೆಸ್‌ ಹೈಕಮಾಂಡ್‌ ಖಡಕ್‌ ಸೂಚನೆಯಂತೆ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಭೇಟಿ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದು, ಸಿಎಂ ಆಹ್ವಾನ ಒಪ್ಪಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಳಗ್ಗೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳುತ್ತಿದ್ದು, ಉಭಯ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್ ತೀವ್ರ ಕುತೂಹಲ ಕೆರಳಿಸಿದೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗುತ್ತಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪರೋಕ್ಷವಾಗಿ ಒಪ್ಪಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಅಸಲಿಗೆ, ಕಾಂಗ್ರೆಸ್ ಹೈಕಮಾಂಡ್ ನಿಂದಲೇ ಇಂಥದ್ದೊಂದು ಸೂಚನೆ ಬಂದಿದ್ದು, ಸದ್ಯ ಕೈ ಪಾಳಯದಲ್ಲಿ ಎದ್ದಿರುವ ನಾಯಕತ್ವ ಬದಲಾವಣೆ ಸಮಸ್ಯೆಯನ್ನು ನೀವಿಬ್ಬರೇ ಕುಳಿತು ಬಗೆಹರಿಸಿಕೊಳ್ಳಿ. ಪರಸ್ಪರ ಭೇಟಿಯಾಗಿ ಚರ್ಚಿಸಿ ಒಂದು ತೀರ್ಮಾನಕ್ಕೆ ಬನ್ನಿ ಎಂದು ಖುದ್ದು ಹೈಕಮಾಂಡ್ ನಾಯಕರೇ ಸೂಚಿಸಿದ್ದಾರೆ. ಹೀಗಾಗಿ ಇಂದು ಬ್ರೇಕ್ ಫಾಸ್ಟ್ ಮೀಟಿಂಗ್ ಕರೆಯಲಾಗಿದೆ ಎಂದು ಖುದ್ದು ಸಿದ್ದರಾಮಯ್ಯನವರೇ ಹೇಳಿದ್ದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇನ್ನೂ ನವೆಂಬರ್‌ 28 ರಂದು ಸಂಜೆ ದೆಹಲಿಗೆ ಪ್ರಯಾಣ ಬಳೆಸಬೇಕಿತ್ತು. ಆದರೆ, ಹೈಕಮಾಂಡ್‌ ಸೂಚನೆಯ ಮೇರೆಗೆ ಡಿ ಕೆ ಶಿವಕುಮಾರ್‌ ಅವರು ಏಕಾಏಕಿ ತಮ್ಮ ಪ್ರವಾಸವನ್ನು ರದ್ದುಗೊಳಿಸಿ ಟಿಕೆಟ್ ಕ್ಯಾನ್ಸಲ್ ಮಾಡಿಕೊಂಡಿದ್ದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಬ್ರೇಕ್ ಫಸ್ಟ್ ಮೀಟಿಂಗ್ ಏರ್ಪಾಡಿಸಿದ್ದು, ಅಧಿಕಾರ ಹಂಚಿಕೆ ಕುರಿತು ಮಹತ್ವದ ಮಾತುಕತೆ ನಡೆಯಲಿದೆ.

ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ; ಸಿದ್ದರಾಮಯ್ಯ

ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿರುತ್ತಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುದಾಗಿ ಹೇಳಿದ್ದಾರೆ ಎಂದರು. ಇನ್ನೂ ನವದೆಹಲಿಗೆ ಕರೆದರೆ ತೆರಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.