Tuesday, March 10, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ನಟ ಉಮೇಶ್ ನಿಧನಕ್ಕೆ CM ಸಿದ್ದರಾಮಯ್ಯ ಸಂತಾಪ – ಕಹಳೆ ನ್ಯೂಸ್

ಬೆಂಗಳೂರು : ಕನ್ನಡದ ಹೆಸರಾಂತ ಹಿರಿಯ ಹಾಸ್ಯ ನಟ ಉಮೇಶ್ (80) ಅವರು ಇಂದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಟ ಉಮೇಶ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಉಮೇಶ್ ಅವರ ನಿಧನದ ಸುದ್ದಿ ನೋವು ತಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ತಮ್ಮ ಸಹಜ ಅಭಿನಯದ ಮೂಲಕ ಹಲವು ದಶಕಗಳ ಕಾಲ ಪ್ರೇಕ್ಷಕರನ್ನು ನಗಿಸುತ್ತಾ, ಕನ್ನಡಾಂಬೆಯ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯಗಳು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಜಾಹೀರಾತು
ಜಾಹೀರಾತು

ಅನಾರೋಗ್ಯದಿಂದ ಬಳಲುತ್ತಿದ್ದ ಉಮೇಶ್ ಅವರು ಕಳೆದ ಕೆಲವು ದಿನಗಳಿಂದ ಕಿದ್ವಾಯಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿ ಹಾಕದೆ ಉಮೇಶ್ ಅವರು ಕೊನೆಯುಸಿರೆಳೆದಿದ್ದಾರೆ.ಇದೀಗ ಆಸ್ಪತ್ರೆಯಿಂದ ಉಮೇಶ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಶಿಫ್ಟ್ ಮಾಡಲಾಗಿದೆ. ಬಳಿಕ ರವೀಂದ್ರ ಕಲಾ ಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಜೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.ನಂತರ ವಿಲ್ಸನ್ ಗಾರ್ಡನ್ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.