Saturday, March 7, 2026
ಬೆಂಗಳೂರುರಾಜ್ಯಸುದ್ದಿ

ಜೈಲಲ್ಲಿ ಖೈದಿಗಳಿಗೆ ರಾಜಾತಿಥ್ಯಕ್ಕೆ ಕಾಂಗ್ರೆಸ್‌‍ ಸರ್ಕಾರದ ತುಷ್ಟೀಕರಣವೇ ನೇರ ಕಾರಣ : ಆರ್‌.ಅಶೋಕ್‌ -ಕಹಳೆ ನ್ಯೂಸ್

ಬೆಂಗಳೂರು : ಜೈಲಿನಲ್ಲಿರುವ ಖೈದಿಗಳಿಗೆ ಮೊಬೈಲ್‌ ಸೇರಿದಂತೆ ರಾಜಾತಿಥ್ಯ ಸಿಗುತ್ತಿರುವುದಕ್ಕೆ ಕಾಂಗ್ರೆಸ್‌‍ ಸರ್ಕಾರದ ತುಷ್ಟೀಕರಣವೇ ನೇರ ಕಾರಣ ಎಂಬುದರಲ್ಲಿ ಅನುಮಾನವೇ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದೇಶದ ಸುರಕ್ಷತೆ, ಭದ್ರತೆ ಬಗ್ಗೆ ರಾಜಿ ಮಾಡಿಕೊಳ್ಳುವಷ್ಟು ಕೆಳಮಟ್ಟಕ್ಕೆ ಇಳಿಯುವ ಕಾಂಗ್ರೆಸ್‌‍ ಪಕ್ಷದ ದೇಶದ್ರೋಹಿ ಮನಸ್ಥಿತಿ ನಿಜಕ್ಕೂ ಅಸಹ್ಯಕರ ಮತ್ತು ಅಕ್ಷಮ್ಯ.ಮುಂದಿನ ದಿನಗಳಲ್ಲಿ ಕರ್ನಾಟಕದ ಜನತೆ ಈ ದೇಶದ್ರೋಹಿ ಕಾಂಗ್ರೆಸ್‌‍ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ದೇಶದ್ರೋಹಿ ಕಾಂಗ್ರೆಸ್‌‍ ಸರ್ಕಾರಕ್ಕೆ ಧಿಕ್ಕಾರ. ಕರ್ನಾಟಕದ ಜೈಲುಗಳು ಉಗ್ರರ ಸ್ಲೀಪರ್‌ ಸೆಲ್‌ ಗಳಾಗಿ ಮಾರ್ಪಟ್ಟಿರುವ ಶಂಕೆ ಇದ್ದು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಎನ್‌ಐಎ ತನಿಖೆ ನಡೆಸಬೇಕು ಎಂದು ನವಂಬರ್‌ 10ರಂದು ಕೇಂದ್ರ ಗೃಹಸಚಿವ ಅಮಿತ್‌ ಷಾ ಅವರಿಗೆ ಪತ್ರ ಮುಖೇನ ವಿನಂತಿಸಿದ್ದೆ. ಈ ಹಿನ್ನೆಲೆಯಲ್ಲಿ ಈಗ ಕೇಂದ್ರ ಸರ್ಕಾರ ಕರ್ನಾಟಕದ ಜೈಲುಗಳಲ್ಲಿ ಉಗ್ರರ ನಂಟು ಹೊಂದಿರುವ ಖೈದಿಗಳ ವಿಚಾರಣೆಗೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆ ಎಂದು ಅವರು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು