Saturday, March 7, 2026
ಉಡುಪಿಕಾಪುಸುದ್ದಿ

ಉಡುಪಿಯಲ್ಲಿ ಭೀಕರ ಅಪಘಾತ: ಐವರು ಸಾವು, ನಾಲ್ವರು ಗಂಭೀರ – ಕಹಳೆ ನ್ಯೂಸ್

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೋತಲಕಟ್ಟೆ ಬಿಕ್ಕೋ ಕಂಪನಿ ಎದುರು ಈವೆಂಟ್ ಗೆ ತೆರಳುತ್ತಿದ್ದ ಮಿನಿ ಟೆಂಪೋ ಪಲ್ಟಿಯಾಗಿ ಐವರು ಮೃತಪಟ್ಟು ಮೂವರು ತೀವ್ರ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಘಟಿಸಿದೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಕಾಪುವಿನ ಪ್ರಸನ್ನ ಎಂಬವರ ಮಾಲಕತ್ವದ ಟೆಂಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.  ಉಡುಪಿ  ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳ ಪೈಕಿ ಇಬ್ಬರು ಘಟನಾ ಸ್ಥಳದಲ್ಲಿಯೇ ಉಳಿದ ಮೂವರು ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿ ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯರು ಗಾಯಾಳುಗಳನ್ನು ಮತ್ತು ಮೃತದೇಹಗಳನ್ನು ಆಸ್ಪತ್ರೆ ಸಾಗಿಸುವಲ್ಲಿ ಸಹಕಾರಿಸಿದ್ದಾರೆ. ಕಾಪು ವೃತ್ತ ನಿರೀಕ್ಷಕ ಅಜ್ಜತ್ ಅಲಿ, ಕಾಪು ಎಸೈ ತೇಜಸ್ವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು