Friday, March 6, 2026
ಸುದ್ದಿ

‘ದಿತ್ವಾ’ ಚಂಡಮಾರುತ: ರಾಜ್ಯದಲ್ಲಿ ಭಾರೀ ಮಳೆ, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ-ಕಹಳೆ ನ್ಯೂಸ್

ಬಂಗಾಳಕೊಲ್ಲಿಯಲ್ಲಿ ಉಂಟಾದ ‘ದಿತ್ವಾ’ ಚಂಡಮಾರುತ ಪ್ರಭಾವದಿಂದ ಸೃಷ್ಟಿಯಾದ ವಾಯುಭಾರ ಕುಸಿತದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬುಧವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ತಮಿಳುನಾಡು-ಪುದುಚೇರಿ ಕರಾವಳಿಯ ಕಡೆ ಸಾಗುತ್ತಿರುವ ವಾಯುಭಾರ ಕುಸಿತದಿಂದ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರ ಕನ್ನಡ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜಾಹೀರಾತು
ಜಾಹೀರಾತು

ಬಂಗಾಳಕೊಲ್ಲಿಯ ನೈಋತ್ಯ ಮತ್ತು ಉತ್ತರ ತಮಿಳುನಾಡು-ಪುದುಚೇರಿ ಕರಾವಳಿಗಳಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ದಕ್ಷಿಣ-ನೈಋತ್ಯ ದಿಕ್ಕಿಗೆ ನಿಧಾನವಾಗಿ ಚಲಿಸುತ್ತಿದೆ. ಇದರ ಪರಿಣಾಮವಾಗಿ ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅದೇ ಸಮಯದಲ್ಲಿ, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.