ಶ್ರೀರಾಮ ವಿದ್ಯಾ ಕೇಂದ್ರದ ಅಟಲ್ ಪ್ರಯೋಗಾಲಯದಲ್ಲಿ ಅಟಲ್ ಟಿಂಕರಿಂಗ್ ಫೆಸ್ಟ್ 2025-26 – ಕಹಳೆ ನ್ಯೂಸ್

ಡಿ. 3 ರಂದು ಶ್ರೀ ರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಅಟಲ್ ಟಿಂಕರಿಂಗ್ ಫೆಸ್ಟ್ ಸಮಾರೋಪ ಸಮಾರಂಭ ಕಾರ್ಯಕ್ರಮವು ಸಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ. ಕೃಷ್ಣಪ್ರಸಾದ್ ,ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪದವಿ ವಿಭಾಗದ ಪ್ರಾಂಶುಪಾಲರು ವಹಿಸಿದ್ದರು. ಶ್ರೀ ರಾಮ ಆಡಳಿತ ಮಂಡಳಿಯ ಸದಸ್ಯರಾದ ಶೀಮತಿ ಲಕ್ಷ್ಮಿ ರಘುರಾಜ್, ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರಾದ ವಸಂತ ಬಳ್ಳಾಲ್ , ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀ.ಗೋಪಾಲ್ ಮತ್ತು ಶ್ರೀ ರಾಮ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯೋಪಾಧ್ಯಾಯರಾದ ತಿರುಮಲೇಶ್ವರ ಪ್ರಶಾಂತ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಟಿಎಲ್ ಮೂಲಕ ಅನೇಕ ತಂತ್ರಜ್ಞಾನ ವಿಷಯಗಳನ್ನು ಕರಗತ ಮಾಡಿಕೊಂಡು ವಿಶೇಷ ಸಾಧನೆ ತೋರಿಸುತ್ತಿರುವ ಹಿರಿಯ ವಿದ್ಯಾರ್ಥಿಯಾದ ಶ್ರೀ ರಂಜಿತ್ ಇವರನ್ನು ಗೌರವಿಸಲಾಯಿತು. ಇವರು ತಾನೇ ತಯಾರಿಸಿದ ಫೈಟರ್ ಜೆಟ್ ಮತ್ತು ಡ್ರೋನ್‌ಗಳ ಮೂಲಕ ನಡೆಸಿಕೊಟ್ಟ ಏರ್ಶೋ ವಿದ್ಯಾರ್ಥಿಗಳನ್ನು ಮೂಕವಿಸ್ಮಿತರನ್ನಾಗಿ ಮಾಡಿತು. ಸ್ಪರ್ದೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮವನ್ನು ಸಿ.ಇ.ಟಿ /ನೀಟ್ ನ ವಿಭಾಗ ಮುಖ್ಯಸ್ಥರಾದ ಶ್ರೀಮತಿ ಚೈತನ್ಯ ನಿರ್ವಹಿಸಿದರು.









