Sunday, March 8, 2026
ದಕ್ಷಿಣ ಕನ್ನಡಮಂಗಳೂರುಸುದ್ದಿ

ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ-ಕಹಳೆನ್ಯೂಸ್

ಮಂಗಳೂರು: ಕಾಂತಾರ ನಟ ರಿಷಬ್ ಶೆಟ್ಟಿ ಇತ್ತೀಚೆಗೆ ನಡೆಸಿದ ಹರಕೆಯ ನೇಮೋತ್ಸವ ಇದೀಗ ವಿವಾದಕ್ಕೆ ಕಾರಣವಾಗಿದ್ದು, ನೇಮೋತ್ಸಲದ ಸಂದರ್ಭ ದೈವ ನರ್ತಕರು ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದಕ್ಕೆ ಅಪಸ್ವರ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕಾಂತಾರ ಚಾಪ್ಟರ್ 1 ಚಿತ್ರದ ಯಶಸ್ವಿನ ಬೆನ್ನಲ್ಲೇ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ತಂಡ ಮಂಗಳೂರಿನ ಬಾರೆಬೈಲು ಜಾರಂದಾಯ ಬಂಟ ಹಾಗೂ ವಾರಾಹಿ ಪಂಜುರ್ಲಿ ದೈವಸ್ಥಾನದಲ್ಲಿ ನಡೆದ ಹರಕೆ ನೇಮೋತ್ಸವ ನಡೆಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನೇಮೋತ್ಸವ ಆರಂಭಕ್ಕೂ ಮುನ್ನ ದೈವಸ್ಥಾನದಲ್ಲಿ ದೈವ ಎಣ್ಣೆಬೂಳ್ಯ ನೀಡುವ ವಾಡಿಕೆ ಸಂಪ್ರದಾಯವಿದೆ. ಈ ವೇಳೆ ದೈವ ನರ್ತಕರು ತುಳುನಾಡಿನ ದೈವಾರಾಧನೆ ಸಂಪ್ರದಾಯ ಮೀರಿ ವರ್ತಿಸಿರುವ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ.

ಜಾಹೀರಾತು
ಜಾಹೀರಾತು

ಈ ವೇಳೆ ದೈವ ನರ್ತಕ ರಿಷಬ್ ಕಾಲ ಮೇಲೆ ಮಲಗಿದ್ದರು. ಕೋಲದ ವೇಳೆ ದೈವ ನರ್ತಕ ರಿಷಬ್ ಜೊತೆಗೆ ವರ್ತಿಸಿದ ರೀತಿ ವಿರುದ್ಧ ಟೀಕೆ ವ್ಯಕ್ತವಾಗಿದೆ. ‘ತುಳುನಾಡಿನ ದೈವಾರಾಧನೆಯಲ್ಲಿ ದೈವಗಳು ಈ ರೀತಿ ವರ್ತಿಸುವುದಿಲ್ಲ.ರಿಷಬ್ ಕಾಲ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ,ದೈವವಲ್ಲ ಬದಲಾಗಿ ನರ್ತಕ’ ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ನಟ ರಿಷಬ್ ಶೆಟ್ಟಿಯ ಎರಡೂ ಕಾಂತಾರ ಸಿನಿಮಾಗಳಲ್ಲಿ ಮಾರ್ಗದರ್ಶಕರಾಗಿದ್ದವರೇ ಹರಕೆ ನೇಮೋತ್ಸವದ ವೇಳೆ ಎಣ್ಣೆಬೂಳ್ಯ ಸ್ವೀಕರಿಸಿದ್ದರು. ಈ ವೇಳೆ ದೈವ ನಟ ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ ಭಾವುಕ ಸನ್ನಿವೇಶ ನಡೆದಿತ್ತು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತುಳುನಾಡ ದೈವಾರಾಧಕರ ಪರ-ವಿರೋಧ ಚರ್ಚೆ ನಡೆದಿದೆ. ತುಳುನಾಡಿನ ದೈವಾರಾಧನಾ ಪರಂಪರೆಯಲ್ಲಿ ದೈವ ನರ್ತನ ನಿಯಮ ಮೀರಿ ವರ್ತಿಸಬಾರದು. ದೈವಾರಾಧನೆಯ ಕಟ್ಟಲೆಗಳನ್ನು ಮೀರಿ ದೈವ ಕೋಲದ ಸಂಪ್ರದಾಯ ಮರೆತು ವರ್ತಿಸಿದ್ದಾರೆ. ಸದ್ಯ ದೈವ ನರ್ತಕರ ನಡೆ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಭಾರೀ ಪರ-ವಿರೋಧ ಚರ್ಚೆಯಾಗುತ್ತಿದೆ.