ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರ್ ಮತ್ತು ಪ್ರಜ್ವಲ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಅಶ್ವಿನಿ ಪರುವಾಯಿ, ಜತೆ ಕಾರ್ಯದರ್ಶಿಯಾಗಿ ಸುಮನ ಕೇಪು ಆಯ್ಕೆ-ಕಹಳೆನ್ಯೂಸ್

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್ ಮಹಲ್ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾಧ್ಯಕ್ಷರಾದ ತಾರನಾಥ ಗಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ದಕ್ಷಿಣ ಕನ್ನಡ ಜಿಲ್ಲಾ ಗೌರವಾಧ್ಯಕ್ಷರಾದ ಹರೀಶ್ ಬಂಟ್ವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾನುಟ್ ಜೆ ಪಿಂಟೊ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷರಾದ ರಾಮ್‌ದಾಸ್ ಶೆಟ್ಟಿ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಅಧ್ಯಕ್ಷರಾದ ಯಶ್ವಿತ್ ಕಾಳಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ಮುಂದಿನ 2 ವರ್ಷಗಳ ಅವಧಿಗೆ ಜಿಲ್ಲಾ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಆಯ್ಕೆ ಪ್ರಕೃಯೆ ನಡೆಸಲಾಯಿತು. ಬಳಿಕ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ಘಟಕದ ಅಧ್ಯಕ್ಷರು ರಾಮ್‌ದಾಸ್ ಶೆಟ್ಟಿಯವರು ತಾಲೂಕು ಉಪಾಧ್ಯಕ್ಷರನ್ನಾಗಿ ಅಕ್ಕರೆ ನ್ಯೂಸ್ ಸಂಸ್ಥಾಪಕ ಜಯಪ್ರಕಾಶ್ ಕೆ ಬದಿನಾರು ಹಾಗೂ ಪ್ರಜ್ವಲ್ ಕೋಟ್ಯಾನ್ (ಕಹಳೆ ನ್ಯೂಸ್) , ಜತೆಕಾರ್ಯದರ್ಶಿಯಾಗಿ ಸುಮನಾ ಕೇಪು (ಕಹಳೆ ನ್ಯೂಸ್) , ಕೋಶಾಧಿಕಾರಿಯಾಗಿ ಅಶ್ವಿನಿ ಪೆರುವಾಯಿ (ವಿಟಿವಿ ನ್ಯೂಸ್ )ರವರನ್ನು ನೇಮಕ ಮಾಡಿದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ನೂತನ ಅಧ್ಯಕ್ಷರಾದ ಈಶ್ವರ್ ವಾರಣಾಶಿ ಸೇರಿದಂತೆ ಜಿಲ್ಲೆ ಹಾಗೂ ತಾಲೂಕಿನ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.














