
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು, ಸಜಾ ಬಂದಿಗಳಿರುವ ವಿವಿಧ ಬ್ಯಾರಕ್‌ಗಳಲ್ಲಿ ಜೈಲಿನ ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಪರಿಶೀಲಿಸಿದಾಗ ಮತ್ತಷ್ಟು ಮೊಬೈಲ್ ಹಾಗೂ ಸಿಮ್ ಕಾರ್ಡ್‌ಗಳು ಪತ್ತೆಯಾಗಿರುವುದು ಗೊತ್ತಾಗಿದೆ.
ಆರು ಬಾರಿ ಪರಿಶೀಲನೆ ನಡೆಸಲಾಗಿದೆ. ಈ ಅವಧಿಯಲ್ಲಿ 67 ಮೊಬೈಲ್, 14 ಚಾರ್ಜರ್, 48 ಸಿಮ್, 10 ಇಯರ್ ಫೋನ್, ₹64 ಸಾವಿರ ನಗದು, 13 ಆಯುಧಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಈ ಪ್ರಕರಣಕ್ಕೆ ಸಂಬಂಧಿಸಿದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಪೊಲೀಸ್ ಠಾಣೆಯಲ್ಲಿ ಆರು ಎಫ್‌ಐಆರ್‌ಗಳು ದಾಖಲಾಗಿವೆ.














