Saturday, March 7, 2026
ರಾಷ್ಟ್ರೀಯಸಂತಾಪಸುದ್ದಿ

ವ್ಯಕ್ತಿಯನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿಟ್ಟು ಬೆಂಕಿ ಹಚ್ಚಿದ ದುಷ್ಕರ್ಮಿಗಳು – ಕಹಳೆ ನ್ಯೂಸ್

ಪುಣೆ: ದುಷ್ಕರ್ಮಿಗಳು ವ್ಯಕ್ತಿಯೋರ್ವನನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿಟ್ಟು ಬೆಂಕಿ ಹಚ್ಚಿರುವ ಘೋರ ಘಟನೆ ಮಾಹಾರಾಷ್ಟ್ರದ ಲಾತೂರ್ ನಲ್ಲಿ ನಡೆದಿದೆ.

ಔಷಾ ತಾಂಡಾ ನಿವಾಸಿ ಗಣೇಶ್ ಚೌವ್ಹಾಣ್ ಎಂಬಾತನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಕಾರಿನಲ್ಲಿ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಗೋಣಿಚೀಲದಲ್ಲಿ ವ್ಯಕ್ತಿಯನ್ನು ತುಂಬಿ ಹಗ್ಗದಿಂದ ಕಟ್ಟಲಾಗಿದ್ದು ಬಳಿಕ ಕಾರಿನಲ್ಲಿಟ್ಟು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ಜಾಹೀರಾತು
ಜಾಹೀರಾತು

ಗಣೇಶ್ ಚೌವ್ಹಾಣ್ ಐಸಿಐಸಿಐ ಬ್ಯಾಂಕ್ ನಲ್ಲಿ ರಿಕವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಪೊಲೀಸರು ಕಾರಿನಲ್ಲಿದ್ದ ಮೃತದೇಹ ತೆಗೆದು ಕುಟುಂಬಕ್ಕೆ ಹಸ್ತಾಂತರಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಗಣೇಶ್ ಅವರ ಆಪ್ತರು ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಭಾನುವಾರ ಅವರ ಫೋನ್ ಸ್ವಿಚ್ಡ್ ಆಫ್ ಬಂದಿತ್ತು. ಇದ್ದಕ್ಕಿದ್ದಂತೆ ಫೋನ್ ಸ್ವಿಚ್ ಆಫ್ ಆಗಿರುವುದು ನೋಡಿ ಕುಟುಂಬದವರು ಗಾಬರಿಯಾಗಿ ಅವರನ್ನು ಹುಡುಕುತ್ತಿದ್ದರು. ಈ ವೇಳೆ ಮಾಹಿತಿ ಸಿಕ್ಕಿದ್ದು, ಪೊಲೀಸರಿಗೆ ತಿಳಿಸಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Dailyhunt