Wednesday, March 11, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಕ್ರಮ ಗೋ ಸಾಗಾಟ : ಪ್ರಕರಣ ದಾಖಲು, ಮನೆ ಹಾಗೂ ಕೊಟ್ಟಿಗೆ ಜಪ್ತಿ-ಕಹಳೆ ನ್ಯೂಸ್

ಬಂಟ್ವಾಳ: ವದೆ ಮಾಡುವ ಉದ್ದೇಶದಿಂದ ಜಾನುವರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ‌ ಸಹಿತ ಆರೋಪಿಯನ್ನು ವಶಪಡಿಸಿಕೊಂಡು ಆರೋಪಿಯ ಮನೆ ಹಾಗೂ ಕೊಟ್ಟಿಗೆ ಜಪ್ತಿ ಮಾಡಿದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಉಳಿ ಗ್ರಾಮದಲ್ಲಿ ನಡೆದಿದೆ.

ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿಯ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್.ಐ. KA-70-8686 ನೇ ನೊಂದಣಿಯ ಗೂಡ್ಸ್ ಅಟೋವನ್ನು ತಡೆದು ಪರಿಶೀಲಿಸಿದಾಗ, ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಾಹನದ ಚಾಲಕರಲ್ಲಿ ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ(56) ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಬಂಟ್ವಾಳ ಸರಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ ಪರವಾನಿಗೆ ಇಲ್ಲದೇ ಎಲ್ಲಿಯೋ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡವುದರ ಬಗ್ಗೆ ತಿಳಿಸಿದ್ದು, ಮುಂದಿನ ಕಾನೂನುಕ್ರಮಕ್ಕಾಗಿ ಜಾನುವಾರು, ಅಟೋ ಹಾಗು ಒಂದು ಮೊಬೈಲ್ ಫೋನ್ ನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ85/2025, ಕಲಂ: ಕಲಂ: 5, 7, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಜಾಹೀರಾತು
ಜಾಹೀರಾತು

ಆರೋಪಿತ ಭೋಜ ಮೂಲ್ಯ ರವರ ಮನೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿದೆ.