Tuesday, March 10, 2026
ಸುದ್ದಿ

ನ್ಯಾಯಾಲಯಕ್ಕೆ ಹಾಜರಾಗದೆ ಎಸ್ಕೇಪ್ ಆಗಿದ್ದ ಮೀಸೆ ರವೂಫ್ ಅರೆಸ್ಟ್ -ಕಹಳೆ ನ್ಯೂಸ್

ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಮೀಸೇ ರವೂಫ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕಾಸರಗೋಡು ನಿವಾಸಿ ಅಬ್ದುಲ್ ರವೂಫ್ @ ಮೀಸೆ ರವೂಫ್, ಪ್ರಾಯ 48 ವರ್ಷ, ಎಂಬಾತನ ಮೇಲೆ ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 19 ಪ್ರಕರಣಗಳು ದಾಖಲಾಗಿರುತ್ತದೆ ಮತ್ತು ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಹಾಗೂ ಕೋಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು ಸೇರಿ ಒಟ್ಟು 25 ಪ್ರಕರಣಗಳು ದಾಖಲಾಗಿದ್ದು, ಕಾವೂರು ಠಾಣಾ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿರುತ್ತದೆ ಹಾಗೂ ಕೋಣಾಜೆ ಠಾಣಾ 5 ಪ್ರಕರಣಗಳಲ್ಲಿ ಉದ್ಘೋಷಿತ ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿರುತ್ತದೆ. ಮಂಜೇಶ್ವರ ಪೊಲೀಸ್ ಠಾಣಾ ಒಂದು ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿರುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈತನು ಅಂತರಾಜ್ಯ ನಟೋರಿಯಸ್ ಕ್ರಿಮಿನಲ್ ಕೇರಳ ರಾಜ್ಯದ ಉಪ್ಪಳ ಪೈವಳಿಕೆಯ ಇಸುಬು ಜಿಯಾದ್ @ ಜಿಯಾ ಎಂಬಾತನ ಸಹಚರನಾಗಿರುತ್ತಾನೆ. ಈತನನ್ನು ಉತ್ತರ ಉಪ ವಿಭಾಗದ ಎ.ಸಿ.ಪಿ ಯವರಾದ ಶ್ರೀ ಶ್ರೀಕಾಂತ. ಕೆ. ರವರ ನೇತೃತ್ವದ ತಂಡದವರಾದ ಶ್ರೀ ಚಂದ್ರಶೇಖರ್, ಎ.ಎಸ್.ಐ, ಸಿಬ್ಬಂದಿಗಳಾದ ಹೆಚ್.ಸಿ .ರೆಜಿ ವಿ.ಎಂ , ದಾಮೋದರ.ಕೆ ಮತ್ತು ಹಾಲೇಶ್ ನಾಯ್ಕ್ ರವರು ಈ ದಿನ ದಿನಾಂಕ:16-12-2025 ರಂದು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

ಜಾಹೀರಾತು
ಜಾಹೀರಾತು